ತುಮಕೂರು: ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್. ಅವರ ಮಾಹಿತಿಯನ್ನು ಒಡಿಶಾ ಪೊಲೀಸರು ಸಂಗ್ರಹಿಸುತ್ತಿದ್ದಾರೆ.
ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿ ತನದಿಂದ ಕೋಮುಬಣ್ಣ ನೀಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದು ಅತ್ಯಂತ ದುರಾದೃಷ್ಟಕರ ಎಂದು ಒಡಿಶಾ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಈ ಅಪಘಾತಕ್ಕೆ ಕಾರಣ ಏನು ಎನ್ನುವುದರ ಬಗ್ಗೆ ಜಿಆರ್ ಪಿ ಯಿಂದ ತನಿಖೆ ನಡೆಯುತ್ತಿದೆ. ಇಂತಹ ಸುಳ್ಳು ಮತ್ತು ದುರುದ್ದೇಶ ಪೂರಿತ ಪೋಸ್ಟ್ ಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ನಾವು ಮನವಿ ಮಾಡುತ್ತೇವೆ. ವದಂತಿಗಳನ್ನು ಹಬ್ಬಿಸಿ ಕೋಮುಸೌಹಾರ್ದತೆ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ಸ್ಪಷ್ಟಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA