ಬೆಂಗಳೂರು: ಶಾಲಾ ಬಸ್ ವೊಂದು ಬಾಲಕಿಯ ಮೇಲೆ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆದಿದೆ.
ಹಾರೋಹಳ್ಳಿ ನಿವಾಸಿ 16 ವರ್ಷ ವಯಸ್ಸಿನ ಕೀರ್ತನಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಸ್ನೇಹಿತರ ಜತೆ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಖಾಸಗಿ ಶಾಲಾ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದ ಬಾಲಕಿಯ ಮೇಲೆಯೇ ಬಸ್ ಹರಿದಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ. ಡೆಲ್ಲಿ ಪಬ್ಲಿಕ್ ಶಾಲೆ ಬಸ್ ಬಾಲಕಿಯ ಮೇಲೆ ಹರಿದ ಬಸ್ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5