ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ, ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಕ್ರಮವನ್ನು ಕೈಗೊಳ್ಳುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಆದೇಶಿಸಿದೆ.
2021—22ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪೂರ್ವ ಪ್ರಾಥಮಿಕ ಹಾಗೂ 1ರಿಂದ 10ನೇ ವರೆಗಿನ ತರಗತಿಗಳು ಕೊವಿಡ್ 19 ನಂತರ ಭೌತಿಕವಾಗಿ ಆರಂಭವಾಗಿದೆ. ಈ ನಡುವೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಗಳನ್ನು ಗಮನಿಸಿಕೊಂಡು ರಜೆ ನೀಡುವಂತೆ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಆರ್. ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700