ಬೆಂಗಳೂರು: ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಶಾಲೆಗಳಲ್ಲಿ, ಹಾಗೂ ಒಂದೇ ಅಡುಗೆ ಮನೆ ಇರುವ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
1-5ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ 1 ಗಂಟೆಯಿಂದ 1.45 ರವರೆಗೆ, 6 ರಿಂದ 10ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ 2 ಗಂಟೆಯಿಂದ 2.40 ರವರೆಗೆ ಪ್ರತ್ಯೇಕ ಸಮಯದಲ್ಲಿ ಬಿಸಿಯೂಟ ವಿತರಿಸಲು ತಿಳಿಸಲಾಗಿದೆ.
ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಚರ್ಚಿಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ದೊಡ್ಡ ಮಕ್ಕಳೊಂದಿಗೆ ಚಿಕ್ಕ ಮಕ್ಕಳನ್ನು ಒಟ್ಟಿಗೆ ನಿಲ್ಲಿಸಿ ಆಹಾರ ವಿತರಿಸಿವುದು ಮತ್ತು ಕಡಿಮೆ ಸಮಯದಲ್ಲಿ ಊಟ ನೀಡುವುದು, ತಟ್ಟೆ – ಲೋಟ ತೊಳೆಯುವಾಗ ನೂಕು ನುಗ್ಗಲು ಉಂಟಾಗುತ್ತದೆ. ಇದನ್ನು ತಡೆಯುವ ಉದ್ದೇಶದಿಂದ ಬಿಸಿಯೂಟ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳಲು ತಿಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy