ತುಮಕೂರು: ಮಕ್ಕಳ ಶಿಕ್ಷಣದ ಜೊತೆಗೆ ಅವರ ಆರೋಗ್ಯದ ಕಡೆಗೂ ಆದ್ಯತೆ ನೀಡುತ್ತಿದ್ದೇವೆ. ಪೂರ್ಣ ಜವಾಬ್ದಾರಿಯಿಂದ ಎಲ್ಲವನ್ನು ಗಮನಿಸುತ್ತಿದೆ. ಹಾಗಾಗಿ ಪೋಷಕಕರು ಆತಂಕಕ್ಕೊಳಗಾಗುವುದು ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ ರೂಪಾಂತರಿ ಒಮಿಕ್ರೋನ್ ವೈರಾಣು ಪತ್ತೆಯಾಗಿದ್ದು, ಸಿಎಂ ತುರ್ತು ಸಭೆ ನಡೆಸಿ ರಾಜ್ಯದಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.
ಶಾಲೆಗೆ ಬರುವ ಮಕ್ಕಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಶಿಕ್ಷಕರಿಗೆ ಸೂಚನೆ ನೀಡಿದ್ದೇವೆ. ಶಾಲೆಗಳಲ್ಲಿ ಪ್ರತಿದಿನ ಸ್ಯಾನಿಟೈಸ್ ಮಾಡಬೇಕೆಂದು ಹೇಳಿದ್ದೇವೆ. ಯಾವುದಾದರೂ ವಿದ್ಯಾರ್ಥಿಗಳಿಗೆ ಕೋವಿಡ್ ಬಂದರೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700