ಕೊಪ್ಪಳ : ಬಾಳೆಹಣ್ಣಿನ ವ್ಯಾಪಾರಿ ಶಬ್ಬೀರ್ ಎಂಬಾತನನ್ನು ಶಿವಮೊಗ್ಗ ಪೊಲೀಸರು ತಡರಾತ್ರಿ ಗಂಗಾವತಿಯ ಮೈಬೂಬ್ ನಗರದ ನಿವಾಸಿಯನ್ನು ವಶಕ್ಕೆ ಪಡೆದಿದ್ದಾರೆ.
ಶಬ್ಬೀರ್, ನಿಷೇಧಿತ ಐಎಸ್ ಸಂಘಟನೆ ಜೊತೆ ನಂಟು ಹೊಂದಿದ ಆರೋಪದಲ್ಲಿ ಜೊತೆಗೆ ಯುವಕರ ಜೊತೆ ನಂಟು ಹೊಂದಿದ್ದ ಎನ್ನಲಾಗಿದೆ.
ತುಂಗೆ ದಡದಲ್ಲಿ ಬಾಂಬ್ ಸ್ಫೋಟ ಪ್ರಯೋಗ ನಡೆಸಿದ್ದ ಯುವಕರ ಮೊಬೈಲ್‌ನಲ್ಲಿ ಶಬ್ಬೀರ್ ಜೊತೆ ಮಾತನಾಡಿದ ಕರೆ ದಾಖಲೆಗಳು ಪತ್ತೆಯಾಗಿವೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸರು ಶಬ್ಬೀರನನ್ನು ವಶಕ್ಕೆ ಪಡೆದು ರಾತ್ರಿಯೇ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy