ಒಂದು ಸಮುದಾಯದವರು ನಿನ್ನೆಯಿಂದ ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ ಸಮುದಾಯದ ನಾಯಕರ ಸಭೆ ಕರೆಯಲು ಸೂಚನೆ ನೀಡಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್‍ಆರ್‍ಪಿಯ ಬೆಟಾಲಿಯನ್‍ಗಳನ್ನು ನಿಯೋಜಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ನಾಡಿನ ಜನರು ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. ಅನುಮತಿ ಪಡೆದು ನಿರ್ದಿಷ್ಟ ಸ್ಥಳದಲ್ಲಿ ಶಾಂತಿಯುತ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಆದರೆ, ನಿನ್ನೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ನಿನ್ನೆ ರಾಜ್ಯದ ಕೆಲವೆಡೆ ಒಂದು ಸಮುದಾಯದವರು ಪ್ರತಿಭಟನೆ ಮಾಡಿದ್ದಾರೆ. ಈತನಕ ರಾಜ್ಯದಲ್ಲಿ ಯಾವುದೇ ತೊಂದರೆಯಾಗಿಲ್ಲ. ಒಂದು ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಈಗಾಗಲೇ ಕ್ಷಮೆ ಕೇಳಿ ಮುಗಿದುಹೋಗಿರುವ ವಿಚಾರಕ್ಕೆ ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


