ಕೊರಟಗೆರೆ : ವಿದ್ಯಾರ್ಥಿಗಳ ಜ್ಞಾನಾರ್ಜನೆ, ಬುದ್ದಿವಂತಿಕೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರವೆಂದು ನಮ್ಮ ಪೂರ್ವಜರು ನಂಬಿದ್ದಾರೆ ಎಂದು ಮುಖ್ಯ ಶಿಕ್ಷಕಿ ಮಂಜುಳ ತಿಳಿಸಿದ್ದಾರೆ.
ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ ಗ್ರಾಮದ ಕಾರ್ಡಿಯಲ್ ಸ್ಕೂಲ್ ನಲ್ಲಿ ಶನಿವಾರ ಶಾರದಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಶಾರದಾ ಪೂಜೆಯನ್ನ ಬಹುತೇಕ ಶಾಲಾ ಕಾಲೇಜುಗಳಲ್ಲಿ ಆಚರಣೆ ಮಾಡಲಾಗುತ್ತದೆ. ಜ್ಞಾನ, ಕಲೆ ಮತ್ತು ಶಿಕ್ಷಣದ ದೇವತೆಯಾದ ಶಾರದೆಯನ್ನ ಶಾಲೆಗಳಲ್ಲಿ ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಮಕ್ಕಳಿಗೆ ಶಾರದೆಯ ಬಗ್ಗೆಯನ್ನ ತಿಳಿಸುವ ಸಲುವಾಗ ವಿದ್ಯಾರ್ಥಿಗಳು ಉತ್ತಮ ಉಡುಗೆಗಳನ್ನ ತೊಟ್ಟು, ಶಾಲೆಯನ್ನ ಸಿಂಗಾರಗೊಳಿಸಿ ವಿವಿಧ ಸಾಂಸ್ಕೃತಿಕ ಹಾಡುಗಳಿಗೆ ನೃತ್ಯ ಮಾಡಿ ಎಲ್ಲರೂ ಸೇರಿ ಶಾರದೆ ತಾಯಿಗೆ ವಿಶೇಷ ಪೂಜೆಯನ್ನ ಸಲ್ಲಿಸುವುದು ನಮ್ಮ ಗ್ರಾಮೀಣ ಭಾಗದ ವಾಡಿಕೆಯಾಗಿದೆ ಎಂದು ತಿಳಿಸಿದರು.
ಶಾಲೆಯ ಅಧ್ಯಕ್ಷ ಇಸ್ಮಾಯಿಲ್ ಜಬೀವೂಲ್ಲಾ ಮಾತನಾಡಿ, ಪ್ರತಿವರ್ಷ ನಮ್ಮ ಕಾರ್ಡಿಯಲ್ ಸ್ಕೂಲ್ನಲ್ಲಿ ಶಾಲೆಯಲ್ಲಿ ಶಾರದ ಪೂಜೆಯನ್ನ ಆಚರಣೆ ಮಾಡಿಕೊಂಡು ಬರುತ್ತಿದ್ದು, ಮಕ್ಕಳು ಸಂತಸದಿಂದ ತಾಯಿ ಶಾರದೆಯನ್ನ ಪೂಜೆ ಮಾಡಿ ನೃತ್ಯ ಮಾಡಿಕೊಂಡು ಸಹಿ ತನ್ನುವ ಮೂಲಕ ಶಾರದ ಪೂಜೆಯನ್ನ ಅತ್ಯಂತ ಭಕ್ತಿಯಿಂದ ಪೂಜೆ ಸಲ್ಲಿಸಿದರು ಎಂದು ಹೇಳಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


