ಹಲವು ಸಮಯಗಳಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಶರತ್ ಬಾಬು ಇಂದು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಅವರು ಹೈದ್ರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ನಿಧನರಾಗಿದ್ದಾರೆ.
ಸದ್ಯ ಅವರ ಪಾರ್ಥಿವ ಶರೀರವನ್ನು ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ತರಲಾಗುತ್ತಿದೆ ಎಂದು ವರದಿಯಾಗಿದೆ. ಶರತ್ ಬಾಬು ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಚಿತ್ರರಂಗದಲ್ಲಿ 40 ವರ್ಷಗಳನ್ನು ಪೂರೈಸಿರುವ ಶರತ್ ಬಾಬು 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ರಜನೀಕಾಂತ್ ಜೊತೆಗೆ ಮುತ್ತು, ಅರುಣಾಚಲಂ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


