ಮುರುಳಿಧರನ್ ಆರ್., ಚಿತ್ರದುರ್ಗ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದಲ್ಲಿ ರೂ.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಹಿರಿಯೂರು ಶಾಸಕಿಯ ಪತಿ ಡಿ.ಟಿ.ಶ್ರೀನಿವಾಸ್ ದರ್ಬಾರ್ ನಡೆಸಿದ್ದು, ಶಿಷ್ಠಾಚಾರ ಉಲ್ಲಂಘಿಸಿರುವ ಬಗ್ಗೆ ವ್ಯಾಪಕ ಚರ್ಚೆ ಕೇಳಿ ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹೊರವಲಯದಲ್ಲಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆಯ ಸಂದರ್ಭದಲ್ಲಿ ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಪ್ರಾಸ್ತಾವಿಕ ಭಾಷಣ ಮಾಡಬೇಕಿತ್ತು. ಆದರೆ, ಶಾಸಕಿಯ ಪತಿ ವೇಳೆ ಶಿಷ್ಠಾಚಾರ ಉಲ್ಲಂಘಿಸಿ ದರ್ಬಾರ್ ನಡೆಸಿರುವುದು ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ, ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವರಿ ಸಚಿವ ಶ್ರೀರಾಮುಲು ಇದ್ದರು. ಶಾಸಕಿಯ ಬದಲು ಶಾಸಕಿಯ ಪತಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವುದನ್ನು ಯಾರೂ ಕೂಡ ಪ್ರಶ್ನಿದೇ ಮೌನವಾಗಿದ್ದದ್ದು ಕಂಡು ಬಂತು. ಜಿಲ್ಲಾಡಳಿತ ಕೂಡ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎನ್ನುವುದು ಇದೀಗ ಜಿಲ್ಲೆಯಲ್ಲಿ ವ್ಯಾಪಕವಾಗಿ ಚರ್ಚೆಗೀಡಾಗಿದೆ.
ಹಿರಿಯೂರು ತಾಲ್ಲೂಕಿನ ಸುತ್ತಮುತ್ತಲಿನ ಸರ್ಕಾರಿ ಕಾರ್ಯಕ್ರಮಗಳ ಬ್ಯಾನರ್ ನಲ್ಲಿಯೂ ನಿಯಮ ಉಲ್ಲಂಘಿಸಿ ಡಿ.ಟಿ. ಶ್ರೀನಿವಾಸ್ ಅವರ ಭಾವಚಿತ್ರವನ್ನು ಬಳಸಲಾಗುತ್ತಿದೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಇದನ್ನು ಪ್ರಶ್ನಿಸ ಬೇಕಾಗಿರುವ ವಿರೋಧ ಪಕ್ಷಗಳು ಕೂಡ ಮೌನವಾಗಿರುವುದು ಜನರ ಅಚ್ಚರಿಗೆ ಕಾರಣವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy