nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೌರವ ಧನ ಹೆಚ್ಚಳಕ್ಕಾಗಿ ಒತ್ತಾಯಿಸಿ ಶಾಸಕರ ಮನೆ ಮುಂಭಾಗ ಬಿಸಿಯೂಟ ತಯಾರಕರಿಂದ ಪ್ರತಿಭಟನೆಗೆ ನಿರ್ಧಾರ
    ಜಿಲ್ಲಾ ಸುದ್ದಿ April 25, 2022

    ಗೌರವ ಧನ ಹೆಚ್ಚಳಕ್ಕಾಗಿ ಒತ್ತಾಯಿಸಿ ಶಾಸಕರ ಮನೆ ಮುಂಭಾಗ ಬಿಸಿಯೂಟ ತಯಾರಕರಿಂದ ಪ್ರತಿಭಟನೆಗೆ ನಿರ್ಧಾರ

    By adminApril 25, 2022No Comments2 Mins Read
    anganawadi

    ಮಂಡ್ಯ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮಧ್ಯಾಹ್ನದ ಬಿಸಿಯೂಟ ತಯಾರಕರ ಕೆಲಸವನ್ನು ಖಾಯಂಗೊಳಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಬಿಸಿಯೂಟ ತಯಾರಕರ ಸೇವೆಯನ್ನು ಮಾನವೀಯ ನೆಲೆಗಟ್ಟಿನಲ್ಲಿ ಪರಿಗಣಿಸಿ 60 ವರ್ಷ ತುಂಬಿದ ಬಿಸಿಯೂಟ ತಯಾರಕ ಮಹಿಳೆಯರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಬಾರದು ಎಂದು ಮಂಡ್ಯ ಜಿಲ್ಲಾ ಮಧ್ಯಾಹ್ನದ ಬಿಸಿಯೂಟ ತಯಾರಕರ ಸಂಘದ ಜಿಲ್ಲಾಧ್ಯಕ್ಷೆ ಮಹದೇವಮ್ಮ ಆಗ್ರಹಿಸಿದರು.

    ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ತಾಲ್ಲೂಕಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಬಿಸಿಯೂಟ ತಯಾರಕರ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಕೇವಲ ದಿನಕ್ಕೆ 10 ರೂ.  ಗೌರವಧನ ಪಡೆದುಕೊಂಡು ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಬಿಸಿಯೂಟ ತಯಾರಕ ಮಹಿಳೆಯರು ಬಡಕುಟುಂಬಕ್ಕೆ ಸೇರಿರುವ ನಿರ್ಗತಿಕ, ವಿಶೇಷಚೇತನ ಹಾಗೂ ವಿಧವಾ ಮಹಿಳೆಯರಾಗಿದ್ದಾರೆ.  ಕಳೆದ 19 ವರ್ಷಗಳಿಂದ ಬಿಸಿಯೂಟ ತಯಾರಿಕಾ ಕೆಲಸವನ್ನು ಮಾಡುತ್ತಿರುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಕೇವಲ 2,600ರೂ, 2,700ರೂ ಗೌರವ ಧನವನ್ನು ಮಾತ್ರ ನೀಡುತ್ತಿದೆ. ಸಿಐಟಿಯು ನೇತೃತ್ವದಲ್ಲಿ ಬಿಸಿಯೂಟ ತಯಾರಕರು ನಡೆಸಿದ ಹೋರಾಟದ ಫಲವಾಗಿ ಈಗ ಮಾಸಿಕ ಒಂದು ಸಾವಿರ ರೂ ಗೌರವ ಧನವನ್ನು ಹೆಚ್ಚಿಸಲು ಒಪ್ಪಿರುವ ಸರ್ಕಾರವು 2022ರ ಜನವರಿ ತಿಂಗಳಿನಿಂದ ಒಂದು ಸಾವಿರ ರೂ ಹೆಚ್ಚಿನ ಗೌರವ ಧನ ನೀಡದೇ ಜೂನ್ ತಿಂಗಳಿನಿಂದ ಗೌರವ ಧನ ಹೆಚ್ಚಿಸುವುದಾಗಿ ಮೊಂಡಾಟ ಮಾಡುತ್ತಿದೆ ಎಂದರು.

    ಕಳೆದ 19 ವರ್ಷಗಳಿಂದ ಸೇವೆ ಸಲ್ಲಿಸಿ ಈಗ 60 ವರ್ಷ ತುಂಬಿತೆಂದು ಕೆಲಸ ಕಳೆದುಕೊಂಡು ಖಾಲಿ ಕೈಯ್ಯಲ್ಲಿ ಮನೆಗೆ ಹೋಗುತ್ತಿರುವ ಬಿಸಿಯೂಟ ತಯಾರಕ ಮಹಿಳೆಯರಿಗೆ ತಲಾ 01 ಲಕ್ಷ ರೂ. ಸಹಾಯ ಧನ ನೀಡುವ ಜೊತೆಗೆ ಮಾಸಿಕ 3 ಸಾವಿರ ರೂ ಪಿಂಚಣಿ ಹಣ ನೀಡಬೇಕು ಎಂದು ಒತ್ತಾಯಿಸಿದ ಮಹದೇವಮ್ಮ, ಮೇ 4ರಂದು ಆಯಾ ಕ್ಷೇತ್ರದ ಶಾಸಕರ ಮನೆಯ ಮುಂದೆ ಗೌರವ ಸಂಭಾವನೆಯ   ಪ್ರತಿಭಟನೆ ನಡೆಸಲಿದ್ದು , ಮೇ 10 ರಂದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ಉಗ್ರವಾದ ಪ್ರತಿಭಟನೆ ನಡೆಸಲಿದ್ದೇವೆ. ರಾಜ್ಯ ಸರ್ಕಾರವು ಮಾನವೀಯ ನೆಲೆಗಟ್ಟಿನ ಆಧಾರದ ಮೇಲೆ ಬಿಸಿಯೂಟ ತಯಾರಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಶಾಶ್ವತವಾದ ಪರಿಹಾರ ಕಂಡು ಹಿಡಿಯಬೇಕು ಎಂದು ಮಹದೇವಮ್ಮ ಆಗ್ರಹಿಸಿದರು.

    ಸಭೆಯಲ್ಲಿ ಬಿಸಿಯೂಟ ತಯಾರಕರ ಸಂಘದ ಕೆ.ಆರ್.ಪೇಟೆ ತಾಲ್ಲೂಕು ಘಟಕದ ಅಧ್ಯಕ್ಷೆ  ಭಾಗ್ಯಮ್ಮ, ಕಾರ್ಯದರ್ಶಿ ಲಕ್ಷ್ಮಮ್ಮ , ಪದಾಧಿಕಾರಿಗಳಾದ ವಸಂತಮ್ಮ, ಲಕ್ಷ್ಮಮ್ಮ, ಗೀತಮ್ಮ, ಪ್ರಭಾ, ಭಾಗ್ಯ ಸೇರಿದಂತೆ ನೂರಾರು ಜನ ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು.

    ವರದಿ: ಬಂದೇನವಾಜ ಅ ನದಾಫ ನ್ಯೂಸ್ ಬಾಗಲಕೋಟೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೆಂಗಳೂರು: ಬಿಡದಿಯಲ್ಲಿ ರೈತರು ಯಾರೂ ರಸ್ತೆ ತಡೆ ನಡೆಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದು, ಟೌನ್‌ ಶಿಪ್‌ ಬೇಡವಾದವರು…

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.