nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025
    Facebook Twitter Instagram
    ಟ್ರೆಂಡಿಂಗ್
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 5 ಕೋಟಿ ರೂಪಾಯಿ ಶಾಶ್ವತ ಅನುದಾನ ಬಿಡುಗಡೆಗೆ ಪ್ರಯತ್ನ: ಶಾಸಕ ಮಹಾಂತೇಶ್ ದೊಡ್ಡಗೌಡ್ರ
    ಜಿಲ್ಲಾ ಸುದ್ದಿ August 23, 2022

    5 ಕೋಟಿ ರೂಪಾಯಿ ಶಾಶ್ವತ ಅನುದಾನ ಬಿಡುಗಡೆಗೆ ಪ್ರಯತ್ನ: ಶಾಸಕ ಮಹಾಂತೇಶ್ ದೊಡ್ಡಗೌಡ್ರ

    By adminAugust 23, 2022No Comments2 Mins Read
    kitturu uthsava

    ಪ್ರತಿವರ್ಷ ಕಿತ್ತೂರು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅನುಕೂಲವಾಗುವಂತೆ ಕನಿಷ್ಠ ಐದು ಕೋಟಿ ರೂಪಾಯಿ ಶಾಶ್ವತ ಅನುದಾನವನ್ನು ಪ್ರತ್ಯೇಕವಾಗಿ ತೆಗೆದಿರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರದ ಗಮನಸೆಳೆದು ಶಾಶ್ವತ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ಹೇಳಿದರು.

    ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸುವುದಕ್ಕೆ ಸಂಬಂಧಿಸಿದಂತೆ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ(ಆ.22) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    Provided by
    Provided by

    ಮುಂಬರುವ ದಿನಗಳಲ್ಲಿ ಶಾಸಕರು ಹಾಗೂ ಸರಕಾರಗಳು ಬದಲಾದಾಗ ಅನುದಾನಕ್ಕಾಗಿ ಅಲೆದಾಡುವ ಪರದಾಟ ತಪ್ಪಲಿದೆ ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ಹೇಳಿದರು. ಕನಿಷ್ಠ ಐದು ಕೋಟಿ ರೂಪಾಯಿ ತೆಗೆದಿರಿಸಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಲಾಗುವುದು ಎಂದು ಭರವಸೆಯನ್ನು ನೀಡಿದರು.

    ವೀರಜ್ಯೋತಿಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲು ಅನುಕೂಲವಾಗುವಂತೆ ಯೋಜನೆ ರೂಪಿಸಲಾಗುವುದು. ಹಂಪಿ ಉತ್ಸವ, ದಸರಾ ಮಾದರಿಯಲ್ಲಿ ವಿಜೃಂಭಣೆಯಿಂದ ಕಿತ್ತೂರು ಉತ್ಸವ ಆಚರಿಸುವ ನಿಟ್ಟಿನಲ್ಲಿ ಸಲಹೆ ನೀಡಲಾಗಿದೆ. ಉತ್ಸವದ ಅವಧಿಯನ್ನು ಹೆಚ್ಚಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಹೇಳಿದರು.

    ಮಹಿಳೆಯರಿಗಾಗಿ ಒಂದು ದಿನ ವಿಶೇಷ ಕಾರ್ಯಕ್ರಮ ಒದಗಿಸಬೇಕು ಆಶಯವಿದೆ. ಅದೇ ರೀತಿ ದಸರಾ ಕ್ರೀಡಾಕೂಟ ಮಾದರಿಯಲ್ಲಿ ಕಿತ್ತೂರು ಉತ್ಸವದಲ್ಲಿ ಆಯೋಜಿಸಲು ಸಲಹೆ ನೀಡಲಾಗಿದೆ.

    ಖೇಲೋ ಇಂಡಿಯಾ ಯೋಜನೆಯಡಿ 6-7 ಕೋಟಿ ರೂಪಾಯಿ ಅನುದಾನ ಸಿಗುತ್ತದೆ. ಇದನ್ನು ಬಳಸಿಕೊಳ್ಳಲು ಅನುಕೂಲವಾಗುವಂತೆ 17 ಎಕರೆ ಜಮೀನನ್ನು ಈಗಾಗಲೇ ಕ್ರೀಡಾ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದರು.

    ಉತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು. ಮಾನ್ಯ ಪ್ರಧಾನಮಂತ್ರಿಗಳು ಅಥವಾ ರಾಷ್ಟ್ರಪತಿ ಅವರನ್ನು ಆಹ್ವಾನಿಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ಹೇಳಿದರು.

    ಚೆನ್ನಮ್ಮನ ಕೋಟೆಯ ಪ್ರತಿರೂಪ ನಿರ್ಮಾಣಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು.

    ಕೋಟೆಯ ಸುತ್ತಮುತ್ತಲಿನ ಕಂದಕ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡು ಚೆನ್ನಮ್ಮನ ಕೋಟೆಯ ಪ್ರತಿರೂಪವನ್ನು ನಿರ್ಮಿಸಲು ಜಾಗೆಯನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೆಲಸ ನಡೆದಿದೆ ಎಂದರು.

    ಅಂತಿಮ ವರದಿಯನ್ನು ಆಧರಿಸಿ ಸ್ವತಃ ಮುಖ್ಯಮಂತ್ರಿಗಳೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಶಾಸಕ ದೊಡ್ಡಗೌಡ್ರ ಸಭೆಯಲ್ಲಿ ತಿಳಿಸಿದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ್, ಕಿತ್ತೂರು ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ಚನ್ನಪ್ಪ ಮುತ್ನಾಳ, ಉಳವಪ್ಪ ಉಳ್ಳಾಗಡ್ಡಿ, ಡಿಡಿಪಿಐ ಬಸವರಾಜ ನಾಲತವಾಡ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಸಯೀದಾ ಆಫ್ರಿನ್ ಬಾನು ಬಳ್ಳಾರಿ, ಡಿಎಚ್ಓ ಡಾ.ಮಹೇಶ್ ಕೋಣ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ…

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.