ಬೆಂಗಳೂರು: ರಾತ್ರಿ ಕಾಣೆಯಾಗಿದ್ದಾಳೆಂದು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬೆಳಗೆದ್ದು ನೋಡುವಾಗ ಮನೆ ಮುಂದೆಯೇ ಯುವತಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿಯನ್ನು ಮಹಾನಂದ (21) ಎಂದು ಗುರುತಿಸಲಾಗಿದೆ.
ಕಲಬುರಗಿ ಮೂಲದವಳಾದ ಈಕೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು. ಈ ಘಟನೆ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್ ನಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸೀನ್ ಆಫ್ ಕ್ರೈಮ್ ಪರಿಶೀಲಿಸುತ್ತಿರುವ ಪೊಲೀಸ್ ಅಧಿಕಾರಿಗಳು ಪರಿಶೀಲಿಸಿದ್ದು, ವಿಷವುಣಿಸಿ ಕೊಲೆ ಮಾಡಿ ತಂದು ದುಷ್ಕರ್ಮಿಗಳು ಮನೆ ಮುಂದೆ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮರ್ಡರ್ ಆಗಿರೋದು ಕನ್ಫರ್ಮ್ ಆಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


