ತುರುವೇಕೆರೆ: ಕೊಬ್ಬರಿ ತುಂಬಿದ್ದ ಶೆಡ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಸುಮಾರು 25 ಸಾವಿರಕ್ಕೂ ಅಧಿಕ ಕೊಬ್ಬರಿಗಳು ಬೆಂಕಿಗಾಹುತಿಯಾದ ಘಟನೆ ತುರುವೇಕೆರೆ ತಾಲೂಕು ತಾವರೆಕೆರೆಯ ಬಾನಿ ನಿಂಗಯ್ಯ ಎಂಬವರ ತೋಟದ ಮನೆಯಲ್ಲಿ ನಡೆದಿದೆ.
ತಾವರೆಕೆರೆ ಗ್ರಾಮದ ತೋಟದ ಹತ್ತಿರ ನಿರ್ಮಿಸಿರುವ ಕೊಬ್ಬರಿ ಶೆಡ್ ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಸುಮಾರು 25 ಸಾವಿರಕ್ಕೂ ಅಧಿಕ ಕೊಬ್ಬರಿಗಳು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.
ಘಟನೆಯಿಂದ ಸುಮಾರು 30 ಲಕ್ಷ ಬೆಲೆ ಬಾಳುವ ಕೊಬ್ಬರಿ ಬೆಂಕಿಗಾಹುತಿಯಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ದಂಡಾಧಿಕಾರಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy