ಕಿತ್ತೂರು: ನಂದಿನಿ ಹಾಲಿನ ದರವನ್ನು ಶೀಘ್ರವೇ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶಿಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.
ಹಾಲಿನ ದರ ಪರಿಷ್ಕರಣೆ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ. ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವ ಸಲ್ಲಿಸಿವೆ. ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


