ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಉಚಿತ ತರಬೇತಿ ನೀಡಲು ಉದ್ದೇಶಿಸಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.
ಆಧುನಿಕ ಕುರಿ/ಮೇಕೆ ಸಾಕಾಣಿಕೆ ತರಬೇತಿಯನ್ನು ಅಕ್ಟೋಬರ್ 3 ಮತ್ತು 4ರಂದು ಹಮ್ಮಿಕೊಳ್ಳಲಾಗಿದೆ. ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ಬೆಳಿಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬಹುದಾಗಿದೆ.
ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ 2 ಪಾಸ್ ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816-2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q