ಬೆಂಗಳೂರು: ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಊಟ ಮತ್ತು ಮದ್ಯ ತರಲು ಬೈಕ್ ನಲ್ಲಿ ತೆರಳಿದ್ದ ಸಾಫ್ಟ್‍ವೇರ್ ಎಂಜಿನಿಯರ್ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶ್ರೀಕಾಂತ್(23) ಮೃತ ಸಾಫ್ಟ್‍ವೇರ್ ಎಂಜಿನಿಯರ್ ಎಂದು ತಿಳಿದು ಬಂದಿದೆ. ಐದು ಮಂದಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುವ ಸಲುವಾಗಿ ಶ್ರೀಕಾಂತ್ ಬೈಕ್ ತೆಗೆದುಕೊಂಡು ಊಟ ಮತ್ತು ಮದ್ಯ ತರಲು ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಹೋಗುತ್ತಿದ್ದಾಗ ರಾತ್ರಿ 12:30ರ ಸುಮಾರಿನಲ್ಲಿ ಕಾಮಾಕ್ಯ ಬಸ್ ನಿಲ್ದಾಣ ಸಮೀಪ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ಶ್ರೀಕಾಂತ್ ತಲೆಗೆ ತೀವ್ರ ಪೆಟ್ಟಾಗಿದೆ. ಹಿಂದೆ ಬೈಕ್ ನಲ್ಲಿ ಬರುತ್ತಿದ್ದ ಸ್ನೇಹಿತರು ತಕ್ಷಣ ಶ್ರೀಕಾಂತ್‍ನನ್ನು ಡಿಜಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧ ಬನಶಂಕರಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


