ಧಾರವಾಡ: ರಾಜಕೀಯದ ನಂತರ ಜಗದೀಶ್ ಶೆಟ್ಟರ್ ಕಾರ್ಯಕರ್ತರ ಜೊತೆ ಸೇರಿ ಬಿಜೆಪಿ ಪಕ್ಷ ಇನ್ನಷ್ಟು ಬಲಪಡಿಸುವ ಕೆಲಸ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ ಅವರ ರಾಜೀನಾಮೆ ಪಕ್ಷಕ್ಕೆ ಬಹಳ ದುಃಖದ ಸಂಗತಿ. ಹಾಗೆಂದು ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.
ಧಾರವಾಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬಿಜೆಪಿಯ ಹಿರಿಯ ನಾಯಕರಾಗಿದ್ದರು. ವಕೀಲರಾಗಿದ್ದ ಅವರಿಗೆ ಬಿಜೆಪಿ ಪಕ್ಷ ಕರೆದು ಟಿಕೆಟ್ ನೀಡಿ, ಶಾಸಕರನ್ನಾಗಿ ಮಾಡಿತ್ತು. ಜೊತೆಗೆ ಮುಖ್ಯಮಂತ್ರಿಯನ್ನಾಗಿಯೂ ಮಾಡಿತ್ತು. ಆದರೆ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿರುವುದರಿಂದ ನಮಗೆ ಬಹಳ ನೋವಾಗಿದೆ ಎಂದು ಹೇಳಿದರು.
ಬಿಜೆಪಿ ಪಕ್ಷ ಇಂದು ದೊಡ್ಡ ಪ್ರಮಾಣದಲ್ಲಿ ಬೆಳೆದಿದೆ. ಹಿರಿಯರೊಬ್ಬರು ಮನೆ ತೊರೆದಿದ್ದಕ್ಕೆ ಬೇಜಾರಾಗಿದೆ. ಕೇಂದ್ರದಲ್ಲಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡುತ್ತೇವೆ ಎಂದರೂ ಶೆಟ್ಟರ್ ಕೇಳಲಿಲ್ಲ. ಲಿಂಗಾಯತರನ್ನು ಸಿಎಂ ಮಾಡಿದ್ದೇ ಬಿಜೆಪಿ ಪಕ್ಷ. ಬಿಜೆಪಿ 67 ಸೀಟುಗಳನ್ನು ಲಿಂಗಾಯತರಿಗೆ ಕೊಟ್ಟಿದೆ. ಲಿಂಗಾಯತರಿಗೆ ಮಾನ್ಯತೆ ಕೊಟ್ಟಿದ್ದು ಯಾವ ಪಕ್ಷ ಎಂಬುದು ಜನರಿಗೆ ಗೊತ್ತಿದೆ. ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇ ಆದಲ್ಲಿ ಅವರನ್ನು ಮೂಲೆಗುಂಪು ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅರವಿಂದ ಬೆಲ್ಲದ್ ಬೇಸರ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


