ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಪಟ್ಟಂತೆ ಅನ್ನಪೂರ್ಣೇಶ್ವರಿ ನಗರ ಠಾಣೆ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ , ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರು ಬಂದಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾಗೌಡಳನ್ನು ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಭಾನುವಾರ ಆರ್.ಆರ್.ನಗರ ಮನೆಯಲ್ಲಿ ದಿನವಿಡೀ ಪೊಲೀಸರು ಮಹಜರು ನಡೆಸಿದ್ದು, ಆ ಬಳಿಕ ಪವಿತ್ರಾ ಅವರು ಸುಸ್ತಾಗಿದ್ದರು. ಮಂಗಳವಾರ ಬೆಳಿಗ್ಗೆ ತೀವ್ರ ಆಯಾಸ ಎಂದ ಪವಿತ್ರ ಗೌಡ ಅವರನ್ನು ಪೊಲೀಸರು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡರನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ವಿಚಾರಣೆ ಸಮಯದಲ್ಲಿ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗುತ್ತಿತ್ತು. ಇಂದು (ಜೂನ್ 18) ವಿಚಾರಣೆ ಸಮಯದಲ್ಲಿ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದು, ಪೊಲೀಸರು ಕೂಡಲೇ ಠಾಣೆಗೆ ವೈದ್ಯರನ್ನು ಕರೆಸಿ ಪರಿಶೀಲಿಸಿದ ಬಳಿಕ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ನಾಗರಭಾವಿಯಲ್ಲಿರುವ ಮಲ್ಲತಹಳ್ಳಿ ಸರ್ಕಾರಿ ಆಸ್ಪತ್ರೆಗೆ ಪವಿತ್ರಾರನ್ನು ದಾಖಲು ಮಾಡಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಚಿಕಿತ್ಸೆ ಮುಗಿಯುತ್ತಿದ್ದಂತೆ ಮತ್ತೆ ಠಾಣೆಗೆ ಪವಿತ್ರಾ ಗೌಡರನ್ನು ಪೊಲೀಸರು ಕರೆದುಕೊಂಡು ಹೋಗಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


