ಬೆಂಗಳೂರು : ಮತ್ತೆ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಡಿಸೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.
ಅಂದೇ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗಿದೆ.
ವಿಧಾನಸಭೇ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟದಿಂದ ಕೈಬಿಡಲಾಗಿದ್ದ ನಾಯಕರನ್ನು ಮತ್ತೆ ಸಂಪುಟಕ್ಕೆ ಸೇರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಮಾಜಿ ಸಚಿವರಾದ ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


