ತುಮಕೂರು: ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಶ್ರೀರಾಮನಗರ ವಾರ್ಡ್ ನಂಬರ್ ಐದು ಇವರ ಸಹಯೋಗದೊಂದಿಗೆ ನಗರದ ಶಿರಾಗೇಟ್ ನ ಡಿ.ಎಂ.ಪಾಳ್ಯ ಡಾನ್ ಬೋಸ್ಕೋ ಶಾಲಾವರಣದಲ್ಲಿ 2022 23 ನೇ ಸಾಲಿನ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಗಿತ್ತು.
ಕ್ರೀಡಾಕೂಟಕ್ಕೆ ವಿವಿಧ ಗಣ್ಯರು ಚಾಲನೆ ನೀಡಿದರು. ಸಂಪ್ರದಾಯದಂತೆ ಮಕ್ಕಳಿಗೆ ಕ್ರೀಡಾಸಕ್ತಿ ಮೂಡಿಸುವ ಸಲುವಾಗಿ ವಿವಿಧ ಶಾಲೆಗಳಿಂದ ಆಗಮಿಸಿದ ಕ್ರೀಡಾಪಟುಗಳಿಂದ ಪತಸಂಚಲನ ನಡೆಸಲಾಯಿತು . 100 ಮೀಟರ್ ಓಟ, 200 ಮೀಟರ್ ಓಟ, ಕಬಡ್ಡಿ, ಫುಟ್ಬಾಲ್. ಗುಂಡು ಎಸೆತ ಸೇರಿದಂತೆ ವಿವಿಧ ಕ್ರೀಡೆಗಳು ನಡೆದವು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶ್ರೀರಾಮನಗರ ಪ್ರಾಥಮಿಕ ಪಾಠಶಾಲೆಯ ಎಸ್ ಡಿ ಎಂಸಿ ಅಧ್ಯಕ್ಷ ಬಶೀರ್ ಅಹ್ಮದ್, ಕಳೆದ ಮೂರು ವರ್ಷಗಳಿಂದ ಶಾಲೆಗಳಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ರೀತಿಯ ಕ್ರೀಡಾ ಚಟುವಟಿಕೆಗಳು ನಡೆದಿರಲಿಲ್ಲ. ಇದೀಗ ಶಿಕ್ಷಣ ಇಲಾಖೆ ಕ್ರೀಡಾ ಚಟುವಟಿಕೆಗಳಿಗೆ ಅನುಮತಿ ನೀಡಿದ್ದು ಹಿನ್ನೆಲೆಯಲ್ಲಿ ಹೋಬಳಿ ಮಟ್ಟದ ಕ್ರೀಡಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.
ಮಕ್ಕಳಿಗೆ ಶೈಕ್ಷಣಿಕ ಕಲಿಕೆಯ ಜೊತೆಗೆ ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಲು ಇಂತಹ ಕಾರ್ಯಕ್ರಮಗಳು ಆಯೋಜಿಸುವುದು ಉತ್ತಮವಾಗಿದ್ದು, ಕ್ರೀಡಾ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲಾ ಶಾಲೆಯ ಮುಖ್ಯಸ್ಥರು ಹಾಗೂ ಶಾಸಕರು ಸೇರಿದಂತೆ ಇತರರಿಗೆ ಅಭಿನಂದನೆಗಳನ್ನು ತಿಳಿಸಿದರು.
ನಗರದ ಉತ್ತರ ಬಡಾವಣೆಯ ಸರ್ಕಾರಿ ಶಾಲೆಯ ಪದವೀಧರ ಮುಖ್ಯ ಶಿಕ್ಷಕ ಶಿವಸ್ವಾಮಿ ಮಾತನಾಡಿ , ಶಿಕ್ಷಣ ಕ್ಷೇತ್ರದಲ್ಲಿ ಕಲಿಕಾ ಚೇತರಿಕೆಯ ಪ್ರಾರಂಭವಾದಂತೆ ಕ್ರೀಡಾ ಕ್ಷೇತ್ರಕ್ಕೂ ಚೇತರಿಕೆ ಕಂಡಿದ್ದು , ಇದರಿಂದ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮನ್ನು ವೃದ್ಧಿಸಿಕೊಳ್ಳಬಹುದು ಅದರ ಜೊತೆಗೆ ಪರಸ್ಪರ ಶಾಲೆಗಳಲ್ಲಿನ ಶಾಲೆಯ ಶಿಕ್ಷಕರು ಮಕ್ಕಳ ಸ್ನೇಹ ಬೆಳೆಸಿಕೊಂಡು ಉತ್ತಮವಾದ ಬಾಂದವ್ಯ ವೃದ್ಧಿ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಈ ಕ್ರೀಡಾ ಕಾರ್ಯಕ್ರಮದಲ್ಲಿ ಡಾನ್ ಬೋಸ್ಕೋ ಶಾಲೆಯ ಮುಖ್ಯಸ್ಥ ಫಾದರ್ ವಿನ್ಸೆಂಟ್, ಕ್ರೀಡಾಕೂಟದ ಸಂಚಾಲಕ ರಂಗನಾಥ್ , ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಣ್ಣ ಹಾಗೂ ರವೀಂದ್ರ ಕುಮಾರ್, ವಿಜಯಲಕ್ಷ್ಮಿ, ಶಾರದಮ್ಮ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಮಕ್ಕಳು ಉಪಸ್ಥಿತರಿದ್ದರು.
ವರದಿ: ರವಿಕುಮಾರ್ ಸಿ.ಹೆಚ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy