nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026
    Facebook Twitter Instagram
    ಟ್ರೆಂಡಿಂಗ್
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಪಂಚದಲ್ಲೇ ಅತ್ಯಂತ ಗೌರವ ವೃತ್ತಿ ಶಿಕ್ಷಕ ವೃತ್ತಿ: ಶಾಸಕ ಎಂ.ವಿ.ವೀರಭದ್ರಯ್ಯ
    ಮಧುಗಿರಿ September 8, 2022

    ಪ್ರಪಂಚದಲ್ಲೇ ಅತ್ಯಂತ ಗೌರವ ವೃತ್ತಿ ಶಿಕ್ಷಕ ವೃತ್ತಿ: ಶಾಸಕ ಎಂ.ವಿ.ವೀರಭದ್ರಯ್ಯ

    By adminSeptember 8, 2022No Comments2 Mins Read
    virabhadrappa

    ಮಧುಗಿರಿ: ಪ್ರಪಂಚದಲ್ಲೇ ಅತ್ಯಂತ ಗೌರವ ವೃತ್ತಿ ಶಿಕ್ಷಕ ವೃತ್ತಿ. ಶಿಕ್ಷಕರು ರೋಲ್ ಮಾಡೆಲ್ ಗಳು ಎಂದು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು.

    ಪಟ್ಟಣದ ಕುಂಚಿಟಿಗ ವಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ 135ನೇ ಜಯಂತಿ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

    ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವೃತ್ತಿ ಅನನ್ಯವಾದುದು. ಉನ್ನತ ಶಿಕ್ಷಣದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶಿಕ್ಷಣ ನೀಡಲಾಗುತ್ತದೆ. ಆದರೆ ಪ್ರಾಥಮಿಕ ಶಾಲೆಗಳಲ್ಲಿ ಬೇರು ಮಟ್ಟದಿಂದ ಶಿಕ್ಷಣ ನೀಡಬೇಕು. ಪ್ರಾಥಮಿಕ ಹಾಗೂ ಫ್ರೌಡಶಾಲಾ ಶಿಕ್ಷಕರ ಇವರ ಜವಾಬ್ದಾರಿ, ಪಾತ್ರ ಬಹಳ ಮುಖ್ಯ, ದೇಶದ ಪ್ರಧಾನಿಯಿಂದ ಹಿಡಿದು ರಾಷ್ಟ್ರಪತಿಯವರೆಗೆ ಪ್ರತಿಯೊಬ್ಬರು ಶಿಕ್ಷಕರ ಗರಡಿಯಲ್ಲೇ ಪಳಗಿದವರು ಎಂದರು.

    ಶಿಕ್ಷಕರು ಸಂಘಟಿತರಾಗಿ ಹೌಸಿಂಗ್ ಸೊಸೈಟಿ, ಮತ್ತು ಕೋ- ಆಪರೇಟೀವ್ ಬ್ಯಾಂಕ್ ಆರಂಭಿಸಬಹುದಿತ್ತು, ಇದರ ಬಗ್ಗೆ ಚಿಂತನೆ ನಡೆಸಿದಲ್ಲಿ ನಾನೂ ಸಹ ಸಹಕಾರ ನೀಡುತ್ತೇನೆ ಎಂದು ಇದೇ ವೇಳೆ ಅವರು ಹೇಳಿದರು.

    ಶಿಕ್ಷಕರ ಬೇಡಿಕೆಯಾದ 7ನೇ ವೇತನ ಆಯೋಗದ ಬಗ್ಗೆ ಸದನದಲ್ಲಿ ಚರ್ಚಿಸಿ ಗಮನ ಸೆಳೆಯುತ್ತೇನೆ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಗಮನಕ್ಕೂ ತಂದು ಬಗೆ ಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
    ಕಾರ್ಯಕ್ರಮದಲ್ಲಿ ಆರೋಗ್ಯ ಸಂಜೀವಿನಿಯನ್ನು ಯೋಜನೆಯನ್ನು ನಿವೃತ್ತ ಸರ್ಕಾರಿ ನೌಕರರಿಗೂ ವಿಸ್ತರಿಸಬೇಕು ಎಂದು ಸರ್ವಜ್ಞ ವೇದಿಕೆಯ ಅಧ್ಯಕ್ಷ ವೆಂಕಟರವಣಪ್ಪ ಶಾಸಕರಿಗೆ ಮನವಿ ಸಲ್ಲಿಸಿದಾಗ ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

    ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ತಗ್ಗೀಹಳ್ಳಿ ರಾಮಕೃಷ್ಣ ಆಶ್ರಮದ ಶ್ರೀರಮಾನಂದ ಸ್ವಾಮೀಜಿ ಮಾತನಾಡಿ, ಶಿಕ್ಷಕರ ತಾಳ್ಮೆ ಯಾವ ಸನ್ಯಾಸಿಗೂ ಕಡಿಮೆಯಿಲ್ಲ. ಶಿಕ್ಷಕನಾಗಿದ್ದ ವ್ಯಕ್ತಿ ದೇಶದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಬಹುದು ಎಂಬುದಕ್ಕೆ ರಾಧಾಕೃಷ್ಣ ಉದಾಹರಣೆ. ಇಂಗ್ಲೀಷ್ ಪ್ರಭಾವ ದೇಶದಲ್ಲಿ ಹೆಚ್ಚಾಗಿದ್ದು, ಕಲಬೆರಕೆ ಭಾಷೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ದಿನ ನಿತ್ಯದ ಭಾಷೆಯನ್ನಾಗಿ ಅಳವಡಿಸಿಕೊಂಡಿದ್ದೇವೆ. ಶಿಕ್ಷಣದ ಬಗ್ಗೆ ಮತ್ತು ಕನ್ನಡದ ಬಗ್ಗೆ ಕಡೆಗಣನೆ ಸಲ್ಲದು. ನಮ್ಮ ಮಾತೃ ಭಾಷೆಯ ಬಗ್ಗೆ ನಮಗೆ ಗೌರವವಿರಲಿ. ನಮ್ಮ ಭಾಷೆ ಅವಮಾನಿಸಿದರೆ ತಾಯಿಯನ್ನೇ ಅವಮಾನಿಸಿದಂತೆ ಎಂದರು.

    ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಹೆಚ್. ವೆಂಕಟೇಶಯ್ಯ ಮಾತನಾಡಿ ಸರ್ಕಾರಿ ನೌಕರರಿಗೆ ಅನುಕೂಲವಾಗುವ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರದಲ್ಲೇ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಇದು ಜಾರಿಗೊಂಡಲ್ಲಿ ಒಂದು ಸಾವಿರ ಖಾಯಿಲೆಗಳಿಗೆ ಚಿಕಿತ್ಸೆ ದೊರೆಯಲಿದೆ. 7 ನೇ ವೇತನ ಆಯೋಗ ಜಾರಿಗೆ ಎಲ್ಲ ಸಿದ್ದತೆ ನಡೆದಿದ್ದು, ರಾಜ್ಯದ ಸರ್ಕಾರಿ ನೌಕರರಿಗೂ ಕೇಂದ್ರ ಮಾದರಿಯಲ್ಲಿ ವೇತನ ನೀಡಬೇಕು. ಶಾಸಕರು 7 ನೇ ವೇತನ ಆಯೋಗ ಜಾರಿಗೆ ಸಂಬಂದಪಟ್ಟವರೊಂದಿಗೆ ಚರ್ಚಿಸಿ ಜಾರಿಗೆ ತುರ್ತಾಗಿ ಜಾರಿಗೆ ತರಲು ಶ್ರಮಿಸಬೇಕು ಎಂದು ಮನವಿ ಮಾಡಿದರು.
    ಇದೇ ಸಂದರ್ಭದಲ್ಲಿ ಕರುನಾಡ ವಿಜಯ ಸೇನೆ, ರಕ್ತ ದಾನಿ ಶಿಕ್ಷಕ ಬಳಗ, ರೋಟರಿ ಕ್ಲಬ್ ಗುಡ್ ಲೇಬರ್ ಇಂಡಿಯಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮದಲ್ಲಿ ಪುರಸಭಾಧ್ಯಕ್ಷ ತಿಮ್ಮರಾಯಪ್ಪ, ಬಿಇಓ ಎನ್. ನಂಜುಂಡಯ್ಯ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಡಿ.ಎಸ್. ಹನುಮಂತರಾಯಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ತಾಲೂಕು ಸಂಘದ ಅಧ್ಯಕ್ಷ ಸಂಜಯ್, ಕಾರ್ಯದರ್ಶಿ ಎಂ.ಎನ್. ನಟರಾಜು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಟಿ ರಂಗಧಾಮಯ್ಯ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚೆನ್ನಿಗರಾಮಯ್ಯ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕಿ ಪದ್ಮಾವತಮ್ಮ ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದೊಡ್ಡಯರಗಾಮಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್ ಆರ್ ಶಶಿಕುಮಾರ್ ಕ ಶಾಪ ಅಧ್ಯಕ್ಷ ಸಹನಾ ನಾಗೇಶ್, ಸರ್ವಜ್ಞ ವೇದಿಕೆಯ ಅಧ್ಯಕ್ಷ ವೆಂಕಟರವಣಪ್ಪ ಇತರರಿದ್ದರು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಕೂಡ್ಲಿಗಿ (ವಿಜಯನಗರ):  “ದೇಶ ಸೇವೆಯೇ ಈಶ ಸೇವೆ ಎಂಬ ನಾಣ್ಣುಡಿಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮನಗಾಣಬೇಕಾಗಿದೆ” ಎಂದು ಮಾಜಿ ಸೈನಿಕ…

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.