ತುಮಕೂರು: ಶಿಕ್ಷಕಿಯರ ಮನಸ್ತಾಪದಿಂದ ಬೇಸತ್ತ ಗ್ರಾಮಸ್ಥರು ಶಾಲೆಗೆ ಬೀಗ ಜಡಿದ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಪ್ರತಿದಿನವೂ ಶಾಲೆಗೆ ತಡವಾಗಿ ಬರುವ ಗಂಗಲಕ್ಷ್ಮಮ್ಮ ಹಾಗೂ ಭಾಗ್ಯಮ್ಮ ಅವರಿಗೆ ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲ, ಮಕ್ಕಳಿಗೆ ಪಾಠ ಮಾಡದೇ ಸದಾ ಪರಸ್ಪರ ಜಗಳವಾಡುತ್ತಿರುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ವೈಯಕ್ತಿಕ ವಿಚಾರಗಳು ಸೇರಿದಂತೆ ಶಾಲೆಗೆ ತಡವಾಗಿ ಬರುವ ವಿಚಾರಕ್ಕೆ ಜಗಳವಾಡುತ್ತಾರೆ ಎನ್ನಲಾಗಿದೆ. ಸಹಶಿಕ್ಷಕಿಯರ ಜಗಳ ನೋಡಲಾರದೇ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಘಟನೆ ಸಂಬಂಧ ಶಾಲೆಗೆ ತುಮಕೂರು ಬಿಇಒ ಹನುಮನಾಯಕ್ ಭೇಟಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz