ತಿಪಟೂರು: ಮಕ್ಕಳು ತಿನ್ನುವ ಅನ್ನ, ಸಾಂಬಾರ್, ಮೊಸರು ಕಳಪೆಯಾಗಿದ್ದು, ಶಾಲಾ ಮಕ್ಕಳಿಗೆ ಇದೇ ಆಹಾರ ಗತಿ ಎನ್ನುವಂತಹ ಪರಿಸ್ಥಿತಿ ತಿಪಟೂರು ನಗರದ ಹಳೇಪಾಳ್ಯ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದಿದೆ.
ತಾಲ್ಲೂಕಿನಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಮಸ್ಯೆಗಳ ಆಗರವಾಗಿದ್ದು, ವಿದ್ಯಾರ್ಥಿಗಳ ಪೋಷಕರು ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅಕ್ಷರ ದಾಸೋಹ ಇಲಾಖೆ ಹುಳು ಬಿದ್ದ ಅಕ್ಕಿ ಬೆಳೆಯನ್ನು ಶಾಲೆಗಳಿಗೆ ಸರಬರಾಜು ಮಾಡಲಾಗುತ್ತಿದ್ದು, ಅಧಿಕಾರಿಗಳ ಮರ್ಜಿಗೆ ಬಿದ್ದ ಅಡುಗೆ ಸಿಬ್ಬಂದಿ, ಹುಳುಬಿದ್ದ ಪದಾರ್ಥಗಳಲ್ಲಿಯೇ ಅಡುಗೆ ತಯಾರಿಸಿ ಮಕ್ಕಳಿಗೆ ಬಡಿಸುವ ಅನಿವಾರ್ಯ ಸ್ಥಿತಿ ಸೃಷ್ಟಿಯಾಗಿದೆ.
ನಗರದ ಹಳೇಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸುಮಾರು 407ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮಕ್ಕಳಿಗೆ ಕಳಪೆಗುಣಮಟ್ಟದ ಆಹಾರ ನೀಡಲಾಗುತ್ತಿದೆ. ಇನ್ನೊಂದೆಡೆ ಅಡುಗೆಗೆ ತರಕಾರಿ ತಾರದೇ ಹಣ ಗುಳುಂ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ಶಾಲೆಯಲ್ಲಿ ಮುಖ್ಯಶಿಕ್ಷಕರಿಲ್ಲದೆ ಸಹ ಶಿಕ್ಷಕರೇ ಕೆಲಸ ನಿರ್ವಹಿಸುತ್ತಿದ್ದಾರೆ. ಶಿಕ್ಷಣ ಸಚಿವರ ತವರಿನಲ್ಲೇ ಸರ್ಕಾರಿ ಶಾಲೆಗಳಿಗೆ ಕಳಪೆಗುಣಮಟ್ಟದ ಆಹಾರ ಪೂರೈಕೆಯಾಗುತ್ತಿದ್ದು, ಅಧಿಕಾರಿಗಳು ಹಾಗೂ ಶಿಕ್ಷಣ ಸಚಿವರು ಸಂಬಂಧಪಟ್ಟವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy