ಶಿವಮೊಗ್ಗ: ಸರ್ಕಾರಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ನೂತನ ಅವಕಾಶ ಸಿಕ್ಕಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯು ತನ್ನ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 56 ಜವಾನ (Peon) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಮುಖ ವಿವರಗಳು:
- ಹುದ್ದೆಯ ಹೆಸರು: ಜವಾನ (Peon)
- ಒಟ್ಟು ಖಾಲಿ ಹುದ್ದೆಗಳು: 56
- ಅಧಿಸೂಚನೆ ಸಂಖ್ಯೆ: ADM.DJS.16342/2026
- ನೇಮಕಾತಿ ವಿಧಾನ: ನೇರ ನೇಮಕಾತಿ
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ: ಜುಲೈ 23
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 24 (ರಾತ್ರಿ 11:59 ರವರೆಗೆ)
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ ಸೈಟ್ shivamogga.dcourts.gov.in ಮೂಲಕ ದಿನಾಂಕ ಮೀರುವ ಮುನ್ನ ಉದ್ಯೋಗ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


