ಶಿರಾ: ತಾಲ್ಲೂಕಿನ ವಡ್ಡನಹಳ್ಳಿಯಲ್ಲಿ ಬುಧವಾರ ರಾತ್ರಿ ಮನೆಯ ಬಾಗಿಲ ಬೀಗ ಒಡೆದು ಕಳ್ಳರು ಸುಮಾರು 15 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.
ತಾಲ್ಲೂಕಿನ ವಡ್ಡನಹಳ್ಳಿ ಗ್ರಾಮದ ಕಾರ್ತಿಕ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಅವರ ತಂದೆ, ತಾಯಿ ಇಲ್ಲಿ ವಾಸವಾಗಿದ್ದರು. ಮೂರು ದಿನಗಳ ಹಿಂದೆ ಮಗನ ಮನೆಗೆ ಹೋಗಿದ್ದರು.
ಮನೆಗೆ ಬೀಗ ಹಾಕಿರುವುದನ್ನು ಗಮನಿಸಿದ ಕಳ್ಳರು ಮನೆಯ ಬೀಗ ಒಡೆದು ಒಳಗೆ ನುಗ್ಗಿ ಮನೆಯಲ್ಲಿದ್ದ 2 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC