ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಹಾಗೂ ಅದರ ಎರಡು ಮರಿಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿವೆ.
ಗ್ರಾಮದ ಹೊರವಲಯದಲ್ಲಿರುವ ಶಿವಣ್ಣ ಎಂಬುವವರಿಗೆ ಸೇರಿದ ಕುರಿ ರೊಪ್ಪಕ್ಕೆ ನುಗ್ಗಿದ ಚಿರತೆಯು ಕುರಿಗಳ ಮೇಲೆ ದಾಳಿ ಮಾಡಿದೆ. ಈ ವೇಳೆ ಚಿರತೆಯನ್ನು ಕಂಡು ಬೆಚ್ಚಿಬಿದ್ದ ಸ್ಥಳೀಯರು ಜೋರಾಗಿ ಕಿರುಚಾಡಿದ್ದಾರೆ. ಜನರ ಕೂಗಾಟ ಕೇಳಿ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಬಂದಾಗ, ಚಿರತೆ ಮತ್ತು ಅದರ ಎರಡು ಮರಿಗಳು ಅಲ್ಲಿಂದ ಓಡಿ ಹೋಗಿವೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯನ್ನು ಸೆರೆಹಿಡಿಯಲು ಗ್ರಾಮದ ಆಯಕಟ್ಟಿನ ಜಾಗದಲ್ಲಿ ಬೋನನ್ನು ಇರಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಚಿರತೆಗಳ ಓಡಾಟದಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕೂಡಲೇ ಚಿರತೆ ಮತ್ತು ಅದರ ಮರಿಗಳನ್ನು ಸೆರೆಹಿಡಿದು ಸಂಘರ್ಷಕ್ಕೆ ಮುಕ್ತಿ ಹಾಡಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


