ತುಮಕೂರು: ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜನವರಿ 24ರಂದು ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಗೋಪಾಲದೇವರಹಳ್ಳಿ, ಕಳ್ಳಂಬೆಳ್ಳ, ಚಿಕ್ಕನಹಳ್ಳಿ, ದೊಡ್ಡಅಗ್ರಹಾರ, ಭೂಪಸಂದ್ರ, ಹಾಲೇನಹಳ್ಳಿ ಪಂಚಾಯ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ರೈತರು/ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4