ತುಮಕೂರು: ಬೆಸ್ಕಾಂ ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಬುಕ್ಕಾಪಟ್ಟಣ ಉಪಸ್ಥಾವರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬುಕ್ಕಾಪಟ್ಟಣ, ರಾಮಲಿಂಗಾಪುರ, ನೇರಳಗುಡ್ಡ, ಹುಯಿಲ್ದೊರೆ, ಕುರುಬರಹಳ್ಳಿ ಪಂಚಾಯ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೋವಿಂದರಾಯ ಜಿ.ಹೆಚ್. ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q