ಪ್ರತಿಭಟನೆ ನಡೆಸುತ್ತಿದ್ದ ಶಿವಸೇನೆ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಪಂಜಾಬ್ ನ ಅಮೃತಸರದಲ್ಲಿ ನಡೆದಿದೆ.
ಶಿವಸೇನೆ ಮುಖಂಡ ಸುಧೀರ್ ಸುರಿ ಹತ್ಯೆಗೊಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ನಗರದಲ್ಲಿನ ಪ್ರಮುಖ ದೇವಸ್ಥಾನದ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಗುಂಪಿನಲ್ಲಿದ್ದ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.
ದೇವಸ್ಥಾನದ ಹೊರಭಾಗದಲ್ಲಿ ಹಾನಿಗೊಳಗಾದ ದೇವಸ್ಥಾನದ ಮೂರ್ತಿಗಳು ಕಸದ ತೊಟ್ಟಿಯಲ್ಲಿ ಸಿಕ್ಕಿದ್ದನ್ನು ಖಂಡಿಸಿ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಶಿವಸೇನೆ ಪ್ರತಿಭಟನೆ ಹಮ್ಮಿಕೊಂಡಿತ್ತು.
ಪ್ರತಿಭಟನೆ ವೇಳೆ ಕೆಲವರು ಗಾಳಿಯಲ್ಲಿ ಗುಂಡು ಹಾರಿಸಿದರೆ ಇನ್ನೂ ಕೆಲವರು ಇದನ್ನೇ ದುರುಪಯೋಗಪಡಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz