nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವಾರ್ಚಕರಿಗೆ ಹೆಚ್ಚಿನ ಸಂಭಾವನೆ, ಸರ್ಕಾರಿ ಸೌಲಭ್ಯ ನೀಡಲು ಕ್ರಮವಹಿಸಬೇಕು: ಶಾಸಕ ಅನಿಲ್ ಚಿಕ್ಕಮಾದು
    ತಾಲೂಕು ಸುದ್ದಿ January 19, 2023

    ಶಿವಾರ್ಚಕರಿಗೆ ಹೆಚ್ಚಿನ ಸಂಭಾವನೆ, ಸರ್ಕಾರಿ ಸೌಲಭ್ಯ ನೀಡಲು ಕ್ರಮವಹಿಸಬೇಕು: ಶಾಸಕ ಅನಿಲ್ ಚಿಕ್ಕಮಾದು

    By adminJanuary 19, 2023No Comments2 Mins Read
    shivachryaru

    Provided by
    Provided by

    ಸರಗೂರು: ಶಿವಾರ್ಚಕರಿಗೆ ಸರಕಾರ ನೀಡುತ್ತಿರುವ ಸಂಭಾವನೆಯು ತುಂಬಾ ಕಡಿಮೆಯಾಗಿದ್ದು, ಇದರಿಂದ ಜೀವನ ನಿರ್ವಹಣೆಯೂ ಕಷ್ಟಕರವಾಗಿರುವುದು ನೋವಿನ ಸಂಗತಿಯಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಬೇಸರವ್ಯಕ್ತಪಡಿಸಿದರು.

    ಪಟ್ಟಣದ ಕೋಟೆ-ಸರಗೂರು ಮುಖ್ಯ ರಸ್ತೆಯಲ್ಲಿರುವ ಸೌಜನ್ಯ ಗ್ಯಾಸ್ ಪ್ಯಾಕ್ಟರಿ ಪಕ್ಕದ ತಾಲೂಕು ಶಿವಾರ್ಚಕರ ಸಂಘದ ನಿವೇಶನದಲ್ಲಿ ಬುಧವಾರ ಕೋಟೆ–ಸರಗೂರು ತಾಲೂಕು ಶಿವಾರ್ಚಕರ ಸಂಘದಿಂದ ನಡೆದ ಸಂಘದ ವಾರ್ಷಿಕ ಮಹಾಸಭೆ, ನಾಮಫಲಕ ಅನಾವರಣ, 2023ನೇ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ, ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

    ಶಿವಾರ್ಚಕರಿಗೆ ಹೆಚ್ಚಿನ ಸಂಭಾವನೆ ಸೇರಿದಂತೆ ಸರಕಾರದಿಂದ ಸಿಗುವ ಮೂಲ ಸೌಲಭ್ಯಗಳು ಸಮರ್ಪಕವಾಗಿ ಸಿಗಬೇಕು. ಈ ನಿಟ್ಟಿನಲ್ಲಿ ಇಲಾಖೆ ಕ್ರಮವಹಿಸಬೇಕು. ಇವರು ದೇವಸ್ಥಾನದ ಆರತಿ ತಟ್ಟೆಯಲ್ಲಿನ ಬಿಡಿಗಾಸಿನಿಂದ ತಕ್ಕಮಟ್ಟಿಗೆ ಜೀವನ ನಡೆಸುತ್ತಿದ್ದು, ಸರಕಾರ ಇತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

    ಮೈಸೂರು ಮಹಾರಾಜ ಸಂಸ್ಕೃತ ಪಾಠಶಾಲೆಯ ನಿವೃತ್ತ ಪ್ರಾಧ್ಯಾಪಕ ಪ್ರೊ.ಮಲ್ಲಣ್ಣ ಪ್ರಸ್ತಾವಿಕವಾಗಿ ಮಾತನಾಡಿ, ಇಲ್ಲಿನ ಶಿವಾರ್ಚಕರ ಸಂಘವೂ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿದ್ದು, ಆರ್ಚಕರ ಪುಣ್ಯನಿಧಿಯಿಂದ ಆರ್ಚಕರ ಪಾಠಶಾಲೆ, ಸಮುದಾಯ ಭವನ ನಿರ್ಮಾಣಕ್ಕೆ ಮುನ್ನುಡಿ ಬರೆಯಬೇಕು. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.


    Provided by
    Provided by

    ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ರವಿಕುಮಾರ್ ಶಾಸ್ತ್ರಿ ಮಾತನಾಡಿ, ಸಂಘದ ಬೆಳೆವಣಿಗೆಗೆ ಶಿವಾರ್ಚಕರುಸಹಕರಿಸಬೇಕು. ಸಂಘವು ಮುಂದಿನ ದಿನಗಳಲ್ಲಿ ಹೆಮ್ಮರವಾಗಿ ಬೆಳೆಯಲು ಪ್ರೋತ್ಸಾಹ ಅಗತ್ಯವಾಗಿದೆ ಎಂದರು. ಪಡುವಲು ವಿರಕ್ತಮಠದ ಮಹದೇವಸ್ವಾಮೀಜಿ ಆಶೀರ್ವಚನ ನೀಡಿದರು.

    ಸಂಘದ ಅಧ್ಯಕ್ಷ ರವಿಕುಮಾರ್ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಶಿವಾರ್ಚಕರ ಸಂಘದ ಅಧ್ಯಕ್ಷ ಕೆ.ಎಂ.ನಂಜುಂಡಪ್ಪ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಬಿಜೆಪಿ ಮುಖಂಡ ಎಂ.ಅಪ್ಪಣ್ಣ, ಬಿಜೆಪಿ ಮುಖಂಡ ಡಾ.ಎಚ್.ವಿ.ಕೃಷ್ಣಸ್ವಾಮಿ, ಆಪ್ತಸಹಾಯಕ ಶಿವಕುಮಾರ್, ಜೆಡಿಎಸ್ ಮುಖಂಡ ಜಯಪ್ರಕಾಶ್, ನಾಯಕ ಸಮಾಜದ ಅಧ್ಯಕ್ಷ ದೊಡ್ಡನಾಯಕ ಮಾತನಾಡಿದರು.

    ಸಂಘದ ಗೌರವಾಧ್ಯಕ್ಷರಾದ ನಾಗರಾಜಪ್ಪ, ಸಿ.ನಾಗರಾಜು, ಉಪಾಧ್ಯಕ್ಷ ನಂಜುಂಡಸ್ವಾಮಿ, ಕಾರ್ಯದರ್ಶಿ ಎಂ.ಎಸ್.ಜಗದೀಶ್, ಖಜಾಂಚಿ ಎನ್.ಮಹದೇವಸ್ವಾಮಿ, ನಿರ್ದೇಶಕರಾದ ಎನ್.ಚಂದ್ರಪ್ಪ, ಕೆ.ಜೆ.ಯಶವಂತ್, ಸತೀಶ್, ಗೀತಾಸುಬ್ಬಣ್ಣ, ವೀರಣ್ಣ, ಸುರೇಶ್, ಮಹದೇವಪ್ಪ, ಶಿವಪ್ಪ, ಎನ್.ಎಸ್.ರವಿಕುಮಾರ್, ನಂಜಪ್ಪ, ಶಿವಕುಮಾರ್ ಸೇರಿದಂತೆ ಶಿವಾರ್ಚಕರು ಹಾಜರಿದ್ದರು.

    ಇದೇ ಸಂದರ್ಭದಲ್ಲಿ ಶಿವಾರ್ಚಕ ಸಂಘದ ಹಿರಿಯ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿಯ ಹಾಲಿ, ಮಾಜಿ ಅಧ್ಯಕ್ಷರು, ಸದಸ್ಯರನ್ನು ಸನ್ಮಾನಿಸಲಾಯಿತು. ಸದಸ್ಯರಿಗೆ ನೆನಪಿನ ಕಾಣಿಕೆಯಾಗಿ ಗಡಿಯಾರ ವಿತರಿಸಲಾಯಿತು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.