nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮಹಾ ಪರಾಕ್ರಮಿ ಶಿವಾಜಿ: ಸಿದ್ದಲಿಂಗಪ್ಪ
    ತುಮಕೂರು February 20, 2025

    ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮಹಾ ಪರಾಕ್ರಮಿ ಶಿವಾಜಿ: ಸಿದ್ದಲಿಂಗಪ್ಪ

    By adminFebruary 20, 2025No Comments2 Mins Read
    shivaji

    ತುಮಕೂರು: ಛತ್ರಪತಿ ಶಿವಾಜಿ ಮಹಾರಾಜರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮಹಾ ಪರಾಕ್ರಮಿಯಾಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಮರಾಠ ಕ್ಷತ್ರಿಯ ಪರಿಷತ್ ಹಾಗೂ ಕರ್ನಾಟಕ ಮರಾಠ ಕ್ಷತ್ರಿಯ ಪರಿಷತ್ತಿನ ಸಹಯೋಗದಲ್ಲಿ ಬುಧವಾರ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ‘ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿವಾಜಿಯವರಲ್ಲಿದ್ದ ದೇಶಭಕ್ತಿ, ಆತ್ಮಗೌರವವನ್ನು ಈಗಿನ ಯುವಕರು ಅಳವಡಿಸಿಕೊಳ್ಳಬೇಕು. ಮರಾಠ ಸಮುದಾಯದ ಯುವಕರು ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾವಂತರಾಗಿ, ಭವಿಷ್ಯವನ್ನು ಉತ್ತಮವಾಗಿಸಿಕೊಳ್ಳಬೇಕೆಂದು ತಿಳಿಸಿದರು.


    Provided by
    Provided by

    ಜಿಲ್ಲಾ ಮರಾಠ ಕ್ಷತ್ರಿಯ ಪರಿಷತ್ತಿನ ಗೌರವಾಧ್ಯಕ್ಷ ನಾಗೇಶ್ ರಾವ್ ಗಾಯಕ್ವಾಡ್ ಮಾತನಾಡಿ, ಭಾರತೀಯ ಇತಿಹಾಸದಲ್ಲಿ ಅನನ್ಯ ವ್ಯಕ್ತಿತ್ವವನ್ನು ಹೊಂದಿದ್ದ ಮಹಾನ್ ಶಕ್ತಿಶಾಲಿ ಆಡಳಿತಗಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ನಾವಿಂದು ಗೌರವಯುತವಾಗಿ ಆಚರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಅವರ ಜೀವನ ಮತ್ತು ಆದರ್ಶಗಳನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ತಾಯಿ ಜೀಜಾಬಾಯಿಯವರ ಪ್ರಭಾವದಿಂದ ಶಿವಾಜಿ ಅವರು ಧರ್ಮನಿಷ್ಠ, ಧೈರ್ಯಶಾಲಿ ಮತ್ತು ಪ್ರಜಾಪಾಲಕನಾಗಿ ಬೆಳೆಯಲು ಕಾರಣವಾಯಿತು. ಅವರು ಕೇವಲ ತಮ್ಮ 17ನೇ ವಯಸ್ಸಿನಲ್ಲಿಯೇ ತೋರಣದುರ್ಗ ಕೋಟೆಯನ್ನು ಜಯಿಸುವ ಮೂಲಕ ಸ್ವರಾಜ್ಯದ ಬೀಜವನ್ನು ಬಿತ್ತಿದರು. ಹೋರಾಟದಿಂದ ಹತ್ತಾರು ಕೋಟೆಗಳನ್ನು ಗೆದ್ದು, ಮರಾಠ ಸಾಮ್ರಾಜ್ಯ ಸ್ಥಾಪನೆ ಮಾಡಿದರು ಎಂದು ತಿಳಿಸಿದರು.

    ತಹಶೀಲ್ದಾರ್ ರಾಜೇಶ್ವರಿ ಮಾತನಾಡಿ, ಶಿವಾಜಿ ಮಹಾರಾಜರು ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ. ಒಬ್ಬ ವ್ಯಕ್ತಿ ಎಷ್ಟು ಜೀವಿಸಬೇಕು ಎನ್ನುವುದಕ್ಕಿಂತ ಹೇಗೆ ಜೀವಿಸಬೇಕು? ನಮ್ಮ ಸಂಸ್ಕೃತಿಯನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವುದು ಶಿವಾಜಿಯವರ ಆದರ್ಶಗಳಿಂದ ಕಲಿಯಬೇಕು. ಶಿವಾಜಿ ಮಹಾರಾಜರು ಎಲ್ಲಾ ಧರ್ಮಗಳ ಜನರನ್ನೂ ಗೌರವಿಸಿ ಸಮಾನತೆಯನ್ನು ಉತ್ತೇಜಿಸುತ್ತಿದ್ದರು. ಶಿಸ್ತುಬದ್ಧ ಸೇನೆ ಮತ್ತು ನೌಕಾಪಡೆಯನ್ನು ನಿರ್ಮಿಸಿ, ತಂತ್ರಜ್ಞಾನವನ್ನು ಬಳಸಿಕೊಂಡು ಶತ್ರುಗಳನ್ನು ಸದೆ ಬಡಿಯುವಲ್ಲಿ ಯಶಸ್ವಿಯಾದರು. ಮಹಿಳೆಯರ ಗೌರವವನ್ನು ಕಾಪಾಡಲು ಕಠಿಣ ನಿಯಮಗಳನ್ನು ಜಾರಿಗೆ ತಂದರು ಮತ್ತು ಮಹಿಳಾ ಸುರಕ್ಷತೆಗೆ ಆದ್ಯತೆ ನೀಡುತ್ತಿದ್ದರು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶ್ ಕುಮಾರ್, ಜಿಲ್ಲಾ ಮರಾಠ ಕ್ಷತ್ರಿಯ ಪರಿಷತ್ತಿನ ಅಧ್ಯಕ್ಷ ಜನಾರ್ದನ್ ರಾವ್ ಸೋನಾಲೆ, ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್ ಸಾಳಂಕೆ ಹಾಗೂ ಗಂಗೋಜಿರಾವ್, ಸಹಕಾರ್ಯದರ್ಶಿ ರಮೇಶ್ ಶಿಂಧೆ, ನಿರ್ದೇಶಕರಾದ ರಾಮಕೃಷ್ಣರಾವ್ ಕರಾಂಡೆ, ಹರ್ಷ ಕದಂ, ಮುರಳೀಧರ, ಲೋಕೇಶ್ ಸಾವಂತ್, ಪಾಂಡುರಾವ್, ಗಣೇಶ್ರಾವ್ ಬೋಂಸ್ಲೆ, ಮೋಹನ್ರಾವ್, ರವಿನಾಥ್, ಶ್ರೀನಿವಾಸ್ರಾವ್ ಜಾಧವ್ ಸೇರಿದಂತೆ ಇನ್ನಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುಮಕೂರು: ಹೆತ್ತ ತಾಯಿಯನ್ನೇ ಮಗಳೊಬ್ಬಳು ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿ ಅಂತ್ಯಕ್ರಿಯೆಗೆ ಮುಂದಾಗಿದ್ದ…

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.