ತುಮಕೂರು: ವಿಧಾನ ಸಭಾ ಚುನಾವಣಾ ನೀತಿಸಂಹಿತೆ ಜಾರಿಯಾಗಿದ್ದು, ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಡಿ.ಕೆ. ಶಿವಕುಮಾರ್ ಗೆ ಚುನಾವಣಾ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ಚುನಾವಣಾ ಪ್ರಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತುಮಕೂರು ಜಿಲ್ಲೆಯ ತಿಪಟೂರಿಗೆ ಆಗಮಿಸುತ್ತಿದ್ದಂತೆ ಡಿ.ಕೆ. ಶಿವಕುಮಾರ್ ರನ್ನು ಹೆಲಿಕಾಪ್ಟರ್ನಲ್ಲಿ ಕೂರಿಸಿಯೇ ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದಾರೆ.
ಇವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನಲ್ಲಿದ್ದ ಬ್ಯಾಗ್ಗಳು ಕ್ಯಾಪ್ಟನ್ ಲಗೇಜ್ಗಳನ್ನು ಚೆಕ್ ಮಾಡಲಾಗಿದ್ದು, ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಚುನಾವಣಾ ನೀತಿಸಂಹಿತೆ ಬಿಸಿ ಮುಟ್ಟಿಸಿದ್ದಾರೆ.
ತುಮಕೂರು ನಗರ ವಿಧಾನಸಭಾ ಕ್ಷೇತ್ರ ಹಾಗೂ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಇಂದು ಬಿಜೆಪಿ ಅಭ್ಯರ್ಥಿಗಳು ಒಟ್ಟಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.
ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ ಹಾಗೂ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೌಡ ಇಬ್ಬರು ಏಕಕಾಲದಲ್ಲಿ ತುಮಕೂರು ನಗರದ ಗಣಪತಿ ದೇಗುಲದಲ್ಲಿ ಪೂಜಿ ಸಲ್ಲಿಸಿದರು. ನಂತರ ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ತುಮಕೂರು ನಗರದಲ್ಲಿ ರೋಡ್ ಶೋ ನಡೆಸಿದರು. ಸಂದರ್ಭದಲ್ಲಿ ಚಿತ್ರ ನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್ ಹಾಜರಿದ್ದರು.
ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ತುಮಕೂರು ಪಾಲಿಕೆ ಆವರಣದಲ್ಲಿ ಇದ್ದ ಚುನಾವಣಾ ಅಧಿಕಾರಿ ಕಚೇರಿಗೆ ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ ತೆರಳಿ ನಾಮಪತ್ರ ಸಲ್ಲಿಸಿದರೆ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇದ್ದ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗೆ ಸುರೇಶ್ ಗೌಡ ನಾಮಪತ್ರ ಸಲ್ಲಿಕೆ ಮಾಡಿದರು. ಇದೆ ವೇಳೆ ಶಾಸಕ ಜ್ಯೋತಿ ಗಣೇಶ್ ಕೂಡ ಹಾಜರಿದ್ದರು.
ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಷಡಕ್ಷರಿ ಇಂದು ನಾಮಪತ್ರ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೆಲಿಕ್ಯಾಪ್ಟರನ್ನು ಹೆಲಿಪ್ಯಾಡ್ ನಲ್ಲಿಯೇ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಸುದೀರ್ಘ ತಪಾಸಣೆ ನಡೆಸಿದರು.
ತಿಪಟೂರಿನ ಕಲ್ಪತರು ಗ್ರೌಂಡ್ ಗೆ ಹೆಲಿಕಾಪ್ಟರ್ ಮೂಲಕ ಬಂದಿಳಿದ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ನ್ನು ಸುತ್ತುವರಿದ ಚುನಾವಣಾಧಿಕಾರಿಗಳು ತಪಾಸಣೆ ಮಾಡಿದರು, ಹೆಲಿಕ್ಯಾಪ್ಟರ್ ನಲ್ಲಿದ್ದ ಬ್ಯಾಗ್, ಫಸ್ಟ್ ಏಡ್ ಕಿಟ್, ಕ್ಯಾಪ್ಟನ್ಸ್ ಲಗೇಜ್ ಗಳನ್ನ ಚುನಾವಣಾಧಿಕಾರಿಗಳು ಚೆಕ್ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy