ತುಮಕೂರು: ಸಿದ್ದಗಂಗಾ ಮಠದ ಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನು ದಾಸೋಹ ದಿನವನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಎರಡನೇ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ತಿಳಿಸಿದರು.
ನಾನು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಅವರು ಮಾಡಿರುವ ಸೇವೆಗಳು ಅನನ್ಯ. ಆಧುನಿಕ ಭಾರತದಲ್ಲಿ ಅವರು ಮಾಡಿದ ಸೇವೆಯ ವೇಳೆಯಲ್ಲಿ ನಾವಿರುವುದು ಧನ್ಯತಾ ಭಾವ ಎಂದು ಕೊಂಡಾಡಿದರು.
ಇನ್ನೂ ದಾಸೋಹ ದಿನದ ಆಚರಣೆಯ ರೂಪುರೇಷೆಗಳನ್ನು ಶ್ರೀಗಳ ಜೊತೆಗೆ ಚರ್ಚಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಮಾಧ್ಯಮಗಳಿಗೆ ತಿಳಿಸಿದರು. ಈ ವೇಳೆ ಸಿಎಂ ಜೊತೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಇದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700