ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡು ಬಳಿಯ ಅತ್ತಿಸರದಲ್ಲಿ ಕಡಜ ಹುಳ ಕಡಿದು 8 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ.
ಮೃತ ಬಾಲಕನನ್ನು ನಿಶ್ಚಿತ್ (8 ವರ್ಷ) ಎಂದು ಗುರುತಿಸಲಾಗಿದೆ. ಈತ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.
ಮನೆಯ ಹಿಂಭಾಗದಲ್ಲಿದ್ದ ಬಾಳೆ ಗಿಡದಲ್ಲಿ ಕಡಜದ ಹುಳುವಿನ ಗೂಡಿತ್ತು. ಬಾಲಕ ನಿಶ್ಚಿತ್ ಹಾಗೂ ಆತನ ತಂದೆ ವೆಂಕಟೇಶ್ ಅವರ ಮೇಲೆ ಕಡಜ ಹುಳುಗಳು ಏಕಾಏಕಿ ದಾಳಿ ನಡೆಸಿದ್ದವು.
ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ತಂದೆ–ಮಗನನ್ನು ತಕ್ಷಣವೇ ಹೆಗ್ಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ನಿಶ್ಚಿತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಪ್ರಸ್ತುತ ತಂದೆ ವೆಂಕಟೇಶ್ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
