nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    ಜಿಲ್ಲಾ ಸುದ್ದಿ June 20, 2026

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    By adminJune 20, 2026No Comments3 Mins Read
    shivamogga

    ಶಿವಮೊಗ್ಗ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್–ಯುಜಿ 2026) ಯು ನಗರದಲ್ಲಿ ಜೂನ್ 21 ರಂದು ಮಧ್ಯಾಹ್ನ 2 ರಿಂದ ಸಂಜೆ 05.15 ರವರೆಗೆ ನಡೆಯಲಿದ್ದು ಪರೀಕ್ಷೆ ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

    ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ನೀಟ್(ಯುಜಿ)–2026 ಪರೀಕ್ಷೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಶಿವಮೊಗ್ಗ ನಗರದ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಒಟ್ಟು 4832 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು.

    ನಿಷೇಧಾಜ್ಞೆ ಜಾರಿ: ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಭದ್ರತೆ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಧ್ಯಾಹ್ನ 1 ರಿಂದ ಸಂಜೆ 6 ಗಂಟೆವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

    ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೆ ಒಬ್ಬರಂತೆ ಡ್ಯೂಟಿ ಮ್ಯಾಜಿಸ್ಟ್ರೇಟ್ ರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗುವುದು.

    ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ಪರೀಕ್ಷಾ ಕಾರ್ಯಕ್ಕೆ ನೇಮಿಸಲ್ಪಟ್ಟಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಪರೀಕ್ಷಾ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಲು ಮತ್ತು ಪರೀಕ್ಷಾ ದಿನದಂದು ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 9.30 ಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ತಿಳಿಸಲಾಗಿದೆ ಎಂದರು.

    ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ ನಿರಂತರ ವಿದ್ಯುತ್ ಪೂರೈಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

    ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಆಸನ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದ ಅವರು, ಕೇಂದ್ರದೊಳಗೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಗೂ ಸ್ಮಾರ್ಟ್ ವಾಚ್‌ಗಳು, ಪೆನ್, ಪೆನ್ಸಿಲ್ ಸೇರಿದಂತೆ ಮಾರ್ಗಸೂಚಿಯನ್ವಯ ವಸ್ತುಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ನಿಯೋಜಿತ ಸಿಬ್ಬಂದಿ ಮಾತ್ರ ಹಾಜರಿರಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

    ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರು ಹಾಗೂ ಎನ್‌ಟಿಎ ಸಿಟ್ಟಿಂಗ್ ನೋಡಲ್ ಅಧಿಕಾರಿ ರೇಖಾ ಜೋಷಿ ಮಾತನಾಡಿ ಪರೀಕ್ಷಾ ಕಾರ್ಯ ನಿಯೋಜಿಸಲ್ಪಟ್ಟ ಪರಿವೀಕ್ಷಕರು ಸಮರ್ಪಕವಾಗಿ ಮಾರ್ಗಸೂಚಿಯಂತೆ ತರಬೇತಿ ಹೊಂದಬೇಕು. ಅಭ್ಯರ್ಥಿಗಳು ಯಾವುದೇ ಗೊಂದಲ, ಆತಂಕಕ್ಕೆ ಎಡೆ ಮಾಡದೇ ಸಮಾಧಾನದಿಂದ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಒಂದು ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದ್ದು ಒಂದು ಗಂಟೆ ಹೆಚ್ಚಿನ ಸಮಯಾವಕಾಶ ನೀಡಲಾಗಿದೆ ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಮಾತನಾಡಿ, ಅಭ್ಯರ್ಥಿಗಳು, ಪರೀಕ್ಷೆ ನಿಯೋಜಿತ ಅಧಿಕಾರಿ, ನೌಕರರು ಪರೀಕ್ಷೆಗೆ ಹಾಜರಾಗಬೇಕಾದ ಸಮಯ, ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ವಿವರಿಸಿದರು.

    ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಗಮನಿಸಲು ಸೂಚಿಸಲಾಗಿದೆ:

    ಪಾರದರ್ಶಕ ನೀರಿನ ಬಾಟಲಿಗಳು: ಎಲ್ಲಾ ಅಭ್ಯರ್ಥಿಗಳು ಪಾರದರ್ಶಕವಾದ ನೀರಿನ ಬಾಟಲಿಗಳನ್ನು ತೆಗೆದುಕೊಂಡು ಹೋಗಬಹುದು.

    ಧಾರ್ಮಿಕ ವಸ್ತುಗಳು: ಅಭ್ಯರ್ಥಿಗಳು ತಮ್ಮ ಧಾರ್ಮಿಕ ನಂಬಿಕೆಯ ವಸ್ತುಗಳನ್ನು ಅಥವಾ ಆಭರಣಗಳನ್ನು ಧರಿಸಲು ಅನುಮತಿಯಿದೆ. ಆದರೆ, ತಪಾಸಣೆಗೆ ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಕ್ಕೆ ಸಾಕಷ್ಟು ಮುಂಚಿತವಾಗಿಯೇ ವರದಿ ಮಾಡಿಕೊಳ್ಳಬೇಕು.

    ಉಡುಪುಗಳು : ಹಗುರವಾದ ಬಟ್ಟೆಗಳನ್ನು ಧರಿಸಲು ಆದ್ಯತೆ ನೀಡಲಾಗುತ್ತದೆ. ಆದಾಗ್ಯೂ, ಅಭ್ಯರ್ಥಿಗಳಿಗೆ ಅಗತ್ಯವೆನಿಸಿದರೆ ಪೂರ್ಣ ತೋಳಿನ ಬಟ್ಟೆಗಳನ್ನು (ಫುಲ್ ಸ್ಲೀವ್ಸ್) ಅಥವಾ ಉಣ್ಣೆಯ ಬಟ್ಟೆಗಳನ್ನು ಧರಿಸಲು ಅನುಮತಿಯಿದೆ. ಆದರೆ, ತಪಾಸಣೆಗೆ ಸಹಕರಿಸಲು ಕೇಂದ್ರಕ್ಕೆ ಸಾಕಷ್ಟು ಮುಂಚಿತವಾಗಿ ತಲುಪಬೇಕು.

    ಪಾದರಕ್ಷೆಗಳು: ಚಪ್ಪಲಿಗಳು ಮತ್ತು ಕಡಿಮೆ ಹೀಲ್ಸ್ ಇರುವ ಪಾದರಕ್ಷೆಗಳನ್ನು( ಲೋ ಹೀಲ್ಸ್) ಧರಿಸಲು ಆದ್ಯತೆ ನೀಡಲಾಗುತ್ತದೆ.

    ಸಹಾಯವಾಣಿ ಮತ್ತು ಸಂಪರ್ಕ ಮಾಹಿತಿ: NEET (UG)-2026  ಗೆ ಸಂಬಂಧಿಸಿದ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ, ಅಭ್ಯರ್ಥಿಗಳು ದೂರವಾಣಿ ಸಂಖ್ಯೆ: 011-40759000 / 011-69227700 ಅಥವಾ ಇಮೇಲ್ neetug2026@nta.ac.in  ಮೂಲಕ ಸಂಪರ್ಕಿಸಬಹುದು.

    ಪರೀಕ್ಷೆಯ ಸುಗಮ ನಿರ್ವಹಣೆಗಾಗಿ ಅಭ್ಯರ್ಥಿಗಳು ಮೇಲಿನ ಸಲಹೆಗಳನ್ನು ಪಾಲಿಸಲು ಮತ್ತು ಪರೀಕ್ಷಾ ಸಿಬ್ಬಂದಿಯೊಂದಿಗೆ ಸಹಕರಿಸಬೇಕೆಂದು ವಿನಂತಿಸಿದರು.

    ಸಭೆಯಲ್ಲಿ ಡಿಡಿಪಿಯು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಐಎಸ್‌ಎಫ್ ಅಧಿಕಾರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ

    July 21, 2026

    ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು

    July 21, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.