ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿನ ಬದಲು ಮಹನೀಯರ ಹೆಸರನ್ನು ಇಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಶಿವಮೊಗ್ಗದಲ್ಲಿ ನೂತನವಾಗಿ ವಿಮಾನ ನಿಲ್ದಾಣವಾಗುತ್ತಿದೆ.ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಹೀಗಾಗಿ ಅಂತವರ ಹೆಸರನ್ನಿಡುವುದು ಸೂಕ್ತ ಎಂದು ಬಿಎಸ್ವೈ ಪತ್ರದಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ವಿಮಾನನಿಲ್ದಾಣ ನಿರ್ಮಾಣ 2006ರಲ್ಲೇ ಆರಂಭಗೊಂಡಿತ್ತು. ಆದರೆ ಕಾಮಗಾರಿ ವಿಳಂಬವಾಯ್ತು. ಬೆಂಗಳೂರಿನ ನಂತರ ಅತಿಹೆಚ್ಚು ಉದ್ದದ ರನ್ ವೇ ಹೊಂದಿರುವ ಏರ್‌ಪೋರ್ಟ್ ಶಿವಮೊಗ್ಗ ವಿಮಾನ ನಿಲ್ದಾಣವಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣದ ಸೌಲಭ್ಯ ಹೊಂದಿರಲಿದೆ ಎಂದು ಬಿಎಸ್ವೈ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


