ನವದೆಹಲಿ: ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ, ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ದೆಹಲಿಯಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ, ಅವರದ್ದು ಬ್ರಿಟೀಷ್ ರ ಮೆಂಟಾಲಿಟಿ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದ್ರೆ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ.
ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತಲುಪುತ್ತಿಲ್ಲ, ಬಸ್ ಫ್ರೀ ಅಂತಾ ಹೇಳಿದ್ರು ಬಸ್ ನಿಲ್ಲಿಸಿದ್ರು, ಡಿಪೋದಿಂದ ಬಸ್ ಬಿಡುತ್ತಿಲ್ಲ. ಸಿದ್ದರಾಮಯ್ಯ ಯೋಜನೆಗಳು ನಿಂತಿದೆಯಾ ಎಂದು ಕೇಳಿದ್ದಾರೆ. ಹಣಕಾಸು ಇಲಾಖೆ ಇಟ್ಟುಕೊಂಡು ಸಿದ್ದರಾಮಯ್ಯ ಅವರಿಗೇ ಗೊತ್ತಿಲ್ಲ ಅಂದ್ರೆ ಹೇಗೆ? ಅಂತ ಪ್ರಶ್ನಿಸಿದರು. ಮುಂದುವರೆದು, 10 ಕೆಜಿ ಕೊಡ್ತಿವಿ ಅಂದಿದ್ರು ಈಗ ಅಕ್ಕಿ ಕೊಡ್ತಿಲ್ಲ. ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4