ಬೆಂಗಳೂರು: ಬೆಂಗಳೂರಿನಾದ್ಯಂತ ಶೀಘ್ರದಲ್ಲೇ ನೀರಿನ ದರ ಹೆಚ್ಚಳ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇಂದು ವಿಧಾನಸೌಧದ ಬಳಿ ನಡೆದ 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಈ ಬಗ್ಗೆ ಅವರು ಮಾತನಾಡಿದ್ದಾರೆ.
ಸಾರ್ವಜನಿಕರು ಹಾಗೂ ಮಾಧ್ಯಮದವರೂ ಎಷ್ಟೇ ಬೈದರೂ ನಾವು ನೀರಿನ ದರ ಏರಿಕೆ ಮಾಡೇ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ನೇರವಾಗಿ ಹೇಳಿದ್ದಾರೆ.
ಹಲವು ವರ್ಷಗಳಿಂದ ನೀರಿನ ದರವನ್ನು ನಾವು ಹೆಚ್ಚಳ ಮಾಡಿಲ್ಲ. ನೀರಿನ ದರ ಏರಿಸುವ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ. ನೀರಿಗೆ ಎಷ್ಟು ಖರ್ಚಾಗುತ್ತಿದೆ? ಹಾಗೂ ಎಷ್ಟು ಜನ ನೀರಿನ ಬಿಲ್ ಕಟ್ಟಿಲ್ಲ? ಎಷ್ಟು ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ ಎನ್ನುವ ಸಂಪೂರ್ಣ ಮಾಹಿತಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


