ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆಯಾಗುವುದು ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ.
ಡಿಎ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ.
ಈ ಮೂಲಕ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ನಾಟಕ ಪ್ರಹಸನಕ್ಕೆ ಬಹುತೇಕ ತೆರೆಬಿದ್ದಂತಾಗಿದೆ.
ಸಿ.ಪಿ.ಯೋಗೇಶ್ವರ್ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಕೆಲ ಕಾಲ ಚರ್ಚೆ ಬಳಿಕ ಡಿ.ಕೆ.ಶಿವಕುಮಾರ್ ಹಾಗೂ ಯೋಗೇಶ್ವರ್ ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q