ಬೆಂಗಳೂರು: ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್ ಮಾಡುತ್ತಿರುವ ಖಾಸಗಿ ವಾಹನ ಸವಾರರಿಗೆ ಸಂಚಾರಿ ಪೊಲೀಸರು ದಂಡ ವಿಧಿಸುವ ಮೂಲಕ ಶಾಕ್ ನೀಡಿದ್ದಾರೆ.
ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ನಡೆಸಲಾದ ಕಾರ್ಯಾಚರಣೆಯಲ್ಲಿ ಒಟ್ಟು 456 ಪ್ರಕರಣ ದಾಖಲಿಸಲಾಗಿದ್ದು, 2,54,500 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ.
89 ಕಾರು ಚಾಲಕರಿಂದ 44,500, 54 ರೂ. ಆಟೋ ಚಾಲಕರಿಗೆ 27 ಸಾವಿರ ರೂ. 88 ಬೈಕ್ ಸವಾರರಿಂದ 44 ಸಾವಿರ ರೂ, 62 ಕ್ಯಾಬ್ ಚಾಲಕರಿಂದ 32,500 ರೂ. ಸೇರಿದಂತೆ 160 ಇತರೆ ವಾಹನ ಸವಾರರಿಂದ 80 ಸಾವಿರ ರೂಪಾಯಿ ದಂಡ ಸಂಗ್ರಹ ಮಾಡಲಾಗಿದೆ.
ಬಸ್ ನಿಲ್ದಾಣಗಳಲ್ಲಿ ವಾಹನಗಳ ಪಾರ್ಕಿಂಗ್‌ನಿಂದ ಟ್ರಾಫಿಕ್ ಹೆಚ್ಚಾಗುತ್ತಿತ್ತು. ಇದೀಗ ನಡೆಸಲಾದ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲೂ ಪೊಲೀಸರು ಕಾರ್ಯಾಚರಣೆ ಮುಂದುವರಿಸಲು ಚಿಂತನೆ ನಡೆಸಿದ್ದಾರೆನ್ನಲಾಗಿದೆ.


