ವಿದ್ಯುತ್ ತಂತಿ ಮೇಲಿದ್ದ ವಸ್ತು ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಉದಯಗಿರಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಲ್ಲಪ್ಪ ಮೃತಪಟ್ಟ ವ್ಯಕ್ತಿ. ಮನೆ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಮೇಲೆ ಬಿದ್ದು ವಸ್ತು ತೆಗೆಯಲು ಮಲ್ಲಪ್ಪ ಮುಂದಾಗಿದ್ದಾರೆ. ನೆಲ ಒರೆಸುವ ಮಾಪ್ ಬಳಸಿ ತಂತಿ ಮೇಲಿದ್ದ ವಸ್ತು ತೆಗೆಯಲು ಮುಂದಾಗಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮಲ್ಲಪ್ಪ ಸಾವನ್ನಪ್ಪಿದ್ದಾರೆ.
ಈ ದೃಶ್ಯ ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿದೆ. ಈ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


