ಬಿಹಾರ: ಪತ್ನಿ ಹಬ್ಬಕ್ಕೆ ತವರು ಮನೆಗೆ ಹೋದದ್ದೇ ತಡ ಪತಿ ಯುವತಿಯೊಬ್ಬಳನ್ನು ಮನೆಗೆ ಕರೆದುಕೊಂಡು ಬಂದು ಸರಸ ಸಲ್ಲಾಪದಲ್ಲಿ ತೊಡಗಿದ್ದು, ಆದ್ರೆ ಅದೃಷ್ಟ ಕೆಟ್ಟು ಸ್ಥಳೀಯರ ಕೈಗೆ ಸಿಕ್ಕಿ ಬಿದ್ದ ಘಟನೆ ಬಿಹಾರದ ಪುರ್ನಿಯಾದಲ್ಲಿ ನಡೆದಿದೆ
ಝುನ್ನಿ ಈಸ್ತಂಬರ್ ಪಂಚಾಯತ್‌ನ ಬೇಗಂಪುರ ಮಾಧ್ಯಮಿಕ ಶಾಲೆಯ ಶಿಕ್ಷಕನಾಗಿರುವ ಶೇಖರ್ ಪಾಸ್ವಾನ್ ಅಲಿಯಾಸ್ ರಾಜೇಶ್ ಕುಮಾರ್ ಸಿಕ್ಕಿಬಿದ್ದ ಶಿಕ್ಷಕನಾಗಿದ್ದಾನೆ. ಎರಡು ದಿನಗಳ ಹಿಂದೆ ಪತ್ನಿ ಹಬ್ಬಕ್ಕಾಗಿ ತನ್ನ ತವರು ಮನೆಗೆ ಹೋಗಿದ್ದಳು. ಈ ವೇಳೆ ಸ್ಥಳೀಯ ಯುವತಿಯೊಬ್ಬಳನ್ನು ಮನೆಗೆ ಕರೆತಂದಿದ್ದ ಈತ ಸರಸದಲ್ಲಿ ತೊಡಗಿದ್ದಾಗ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಇದೀಗ ಸಿಕ್ಕಿ ಬಿದ್ದ ಬೆನ್ನಲ್ಲೇ ಗ್ರಾಮಸ್ಥರು ಶಿಕ್ಷಕನಿಗೆ ಈ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಪತ್ನಿ ತವರು ಮನೆಯಿಂದ ಹಿಂದಿರುಗಿದ್ದು, ಪತಿಯ ವಿರುದ್ಧ ಕೇಸ್ ದಾಖಲಿಸಿದ್ದಾಳೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q