ತುಮಕೂರು: ಹಾಡಹಗಲೇ ತೋಟದ ಮನೆಗೆ ನುಗ್ಗಿದ ದರೋಡೆಕೋರರು ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಮೂರು ಲಕ್ಷ ರೂ. ಹಣವನ್ನು ದೋಚಿರುವ ಘಟನೆ ಕುಣಿಗಲ್ ತಾಲೂಕಿನ ಕಸಬಾ ಹೋಬಳಿ ಉರ್ಕಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಉರ್ಕೆಹಳ್ಳಿ ಗ್ರಾಮದ ಗಂಗಯ್ಯ (56) ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಗಯ್ಯ ಮತ್ತು ಅವರ ಕುಟುಂಬ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕ್ಕೆ ಹೊಂದಿಕೊಂಡಂತೆ ಇರುವ ಉರ್ಕಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸಿಸುತ್ತಿದ್ದರು. ಬೈಕ್ ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಮನೆ ಬಳಿ ಬಂದು ಕುಡಿಯಲು ನೀರು ಕೊಡಿ ಎಂದು ಪುಷ್ಪಲತಾ ಅವರನ್ನು ಕೇಳಿದ್ದಾರೆ. ಈ ವೇಳೆ ಪುಷ್ಪಲತಾ ತನ್ನ ತಾಯಿ ಗಂಗಮ್ಮನಿಗೆ ಯಾರೋ ಕುಡಿಯಲು ನೀರು ಕೇಳುತ್ತಿದ್ದಾರೆ ಎಂದು ತಿಳಿಸಿದ್ದು ಗಂಗಮ್ಮ ಕುಡಿಯಲು ನೀರು ತರಲೆಂದು ಮನೆ ಒಳಗೆ ಹೋಗಿದ್ದ ವೇಳೆ ಏಕಾಏಕಿ ದರೋಡೆಕೋರರು ಒಳಗೆ ನುಗ್ಗಿ ಮನೆಯಲ್ಲಿದ್ದ ಮೂರು ಲಕ್ಷ ರೂ. ನಗದನ್ನು ದೋಚಲು ಯತ್ನಿಸಿದ್ದಾರೆ. ಇದರಿಂದ ಗಾಬರಿಗೊಂಡ ಪುಷ್ಪಲತಾ ತೀವ್ರ ವಿರೋಧ ವ್ಯಕ್ತಪಡಿಸಿದರು. ಇದೆ ಸಂದರ್ಭದಲ್ಲಿ ಮನೆಯಲ್ಲೇ ಮಲಗಿದ್ದ ತಂದೆ ಗಂಗಯ್ಯ ಎಚ್ಚರಗೊಂಡು ನೋಡಿದಾಗ ದರೋಡೆಕೋರರು ಹಣವನ್ನು ದೋಚಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ.
ಮನೆಯವರು ಪ್ರತಿಭಟಿಸಿದಾಗ ಓರ್ವ ಗಂಗಯ್ಯನ ಮೇಲೆ ಗುಂಡು ಹಾರಿಸಿದ್ದಾನೆ, ಆ ಗುಂಡು ಗಂಗಯ್ಯನಿಗೆ ತಗಲುವ ಬದಲಾಗಿ ಗೋಡೆಗೆ ತಗಲಿದೆ, ಬಳಿಕ ದರೋಡೆಕೋರರು ಮನೆಯಿಂದ ಪರಾರಿಯಾಗಲು ಯತ್ನಿಸಿದ್ದಾಗ ಮತ್ತೆ ಗಂಗಯ್ಯ ಅವರನ್ನು ಹಿಂಬಾಲಿಸಿದ್ದಾಗ ಮತ್ತೆ ಎರಡನೇ ಬಾರಿ ಗಂಗಯ್ಯನ ಮೇಲೆ ಗುಂಡು ಹಾರಿಸಿದ್ದಾರೆ. ಆ ಗುಂಡು ಗಂಗಯ್ಯನ ಕಾಲಿಗೆ ತಗುಲಿ ಗಾಯವಾಗಿದೆ. ಬಳಿಕ ದರೋಡೆಕೋರರು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಜಿಲ್ಲಾ ಎಸ್ಪಿ ಅಶೋಕ್, ಡಿವೈಎಸ್‌ಪಿ ಓಂಪ್ರಕಾಶ್ ಪರಿಶೀಲನೆ ನಡೆಸಿದರು. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296