17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನವೇ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿ ಶಾಕಿಂಗ್ ಸುದ್ದಿ ಸಿಕ್ಕಿದ್ದು, ಸಿಎಸ್ ಕೆ ತಂಡದ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ವಿದಾಯ ಹೇಳಿದ್ದಾರೆ.
ಐಪಿಎಲ್ ಹಬ್ಬ ಪ್ರಾರಂಭವಾಗಲು ಒಂದು ದಿನ ಬಾಕಿ ಉಳಿದಿದ್ದು, ನಾಳೆ ಚೆನ್ನೈನ ಪಿ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿವೆ. ಈ ನಡುವೆ ಸಿಎಸ್ ಕೆ ತಂಡದ ನಾಯಕ ಎಂಎಸ್ ಧೋನಿ ನಾಯಕತ್ವಕ್ಕೆ ಗುಡ್ ಬೈ ಹೇಳಿದ್ದು, ಅವರ ಬದಲಿಗೆ ತಂಡದ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಗೆ ತಂಡದ ನಾಯಕತ್ವ ಜವಾಬ್ದಾರಿ ನೀಡಲಾಗಿದೆ.
ಕಳೆದ ಆವೃತ್ತಿಯಲ್ಲೇ ಮಂಡಿ ನೋವಿನೊಂದಿಗೆ ಇಡೀ ಲೀಗ್ ಆಡಿದ್ದ ಧೋನಿ ತಂಡವನ್ನು ದಾಖಲೆಯ ಐದನೇ ಬಾರಿಗೆ ಚಾಂಪಿಯನ್ ಮಾಡಿದ್ದರು. ಆ ವೇಳೆಯೆ ಧೋನಿ ಐಪಿಎಲ್ ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಎಲ್ಲಾ ಊಹಾಪೋಹಗಳನ್ನು ಸುಳ್ಳು ಮಾಡಿದ್ದ ಧೋನಿ, ಮತ್ತೆ ಐಪಿಎಲ್ ಅಖಾಡಕ್ಕೆ ಕಾಲಿಟ್ಟಿದ್ದರು. ಇದೀಗ ನಾಯಕತ್ವದಿಂದ ದೂರ ಉಳಿದು ಸಾಮಾನ್ಯ ಆಟಗಾರನಂತೆ ಐಪಿಎಲ್ ನಲ್ಲಿ ಧೋನಿ ಕಾಣಿಸಿಕೊಳ್ಳಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


