ಕೋವಿಡ್-19 ನಿಯಂತ್ರಣಕ್ಕಾಗಿ ಪಡೆದುಕೊಂಡವರು ಕೋವಿಶೀಲ್ಡ್ ಲಸಿಕೆ ಪಡೆದವರು ಥ್ರೊಂಬೋಸಿಸ್ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಸುದ್ದಿಯು ಲಸಿಕೆ ಪಡೆದವರಲ್ಲಿ ಆತಂಕಕ್ಕೆ ಕಾರಣವಾಗಿದೆ. ವೈದ್ಯರ ಪ್ರಕಾರ, ‘ಲಸಿಕೆ ತೆಗೆದುಕೊಂಡ ಪ್ರತಿಯೊಬ್ಬರ ಮೇಲೆ ಪರಿಣಾಮ ಬೀರುವುದಿಲ್ಲ. ಆದ್ದರಿಂದ, ಪ್ಯಾನಿಕ್ ರಿಯಾಕ್ಷನ್ ಅಗತ್ಯವಿಲ್ಲ, ಆದರೆ ಸಿಂಡ್ರೋಮ್ ಗೆ ಸಂಬಂಧಿಸಿದ ಯಾವುದೇ ರೋಗಲಕ್ಷಣಗಳು ಕಂಡು ಬಂದರೆ ಜಾಗರೂಕರಾಗಿರಿ’ ಎಂದಿದ್ದಾರೆ.
ನಿರಂತರವಾದ ರೋಗಿಯ ಮೇಲ್ವಿಚಾರಣೆಯಿಂದ ಸರಿಯಾದ ವೈದ್ಯಕೀಯ ಅಥವಾ ಶಸ್ತ್ರಚಿಕಿತ್ಸೆಯಿಂದ ರೋಗಿಯನ್ನು ಬದುಕುಳಿಸಬಹುದಾಗಿದೆ. ಲಸಿಕೆ ಪಡೆದವರಲ್ಲಿ ಹೆಚ್ಚಾಗಿ ಸಣ್ಣ ವಯಸ್ಸಿನವರಲ್ಲಿ ಹಾಗೂ ಮೊದಲ ಡೋಸ್ ಸ್ವೀಕರಿಸುವವರಲ್ಲಿ ಈ ರೋಗಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕೆಲವೊಮ್ಮೆ ರಕ್ತಸ್ರಾವದಿಂದ ಕಾಣಿಸಿಕೊಳ್ಳಬಹುದು’ ಎಂದಿದ್ದಾರೆ. ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ದೇಹದಲ್ಲಿ ರಕ್ತದ ಹೆಪ್ಪುಗಟ್ಟುವಿಕೆಯನ್ನು ಉಂಟು ಮಾಡುತ್ತದೆ. ರಕ್ತ ಹೆಪ್ಪುಗಟ್ಟುವಿಕೆಯ ಪರಿಣಾಮವಾಗಿ ಪಾರ್ಶ್ವವಾಯು, ಹೃದಯಘಾತವಾಗುವ ಸಾಧ್ಯತೆಯು ಅಧಿಕವಾಗಿದೆ. ಅದಲ್ಲದೇ ಪ್ಲೇಟ್ಲೆಟ್ಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ ಎನ್ನಲಾಗಿದೆ.
ಕೋವಿಡ್ ನಿಯಂತ್ರಣಕ್ಕಾಗಿ ತಾನು ಅಭಿವೃದ್ಧಿಪಡಿಸಿದ್ದ ‘ಕೋವಿಶೀಲ್ಡ್’ ಲಸಿಕೆಯಿಂದ ಮಾರಣಾಂತಿಕ ಆರೋಗ್ಯದ ಸಮಸ್ಯೆ ಉಂಟಾಗುತ್ತದೆ ಎಂದು ಆಸ್ಟ್ರಾಜೆನೆಕಾ ಕಂಪನಿ ಇದೇ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಈ ಲಸಿಕೆಯ ಅಡ್ಡಪರಿಣಾಮಕ್ಕೆ ಒಳಗಾದವರು ಹೂಡಿದ್ದ ಮೊಕದ್ದಮೆಯ ವಿಚಾರಣೆಯ ಭಾಗವಾಗಿ ಕಂಪನಿಯು ಲಂಡನ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಈ ಮಾಹಿತಿ ಇದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA