ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು ಇಬ್ಬರ ಹೆಣ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಶೂಟೌಟ್ ನಡೆದಿದೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಎಸ್ ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್ ಎಸ್ ಎಲ್ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮಧ್ಯಾಹ್ನ 12:30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಬ್ಬರ ಶವ ಕಾರಿನ ಹೊರಭಾಗದಲ್ಲಿ ಬಿದ್ದಿದ್ದು, ಇನ್ನೊಬ್ಬರು ಕಾರಿನ ಎದುರು ಸೀಟ್ ನಲ್ಲಿ ಬಿದ್ದಿದ್ದರು. ಇಬ್ಬರಿಗೂ ಗುಂಡು ತಗುಲಿದ್ದು, ಸ್ಥಳದಲ್ಲೇ ಅಸುನೀಗಿದ್ದಾರೆ. ಒಬ್ಬರಿಗೆ ಮತ್ತೊಬ್ಬ ಗುಂಡು ಹೊಡೆದು ಇನ್ನೊಬ್ಬರು ತಾನೇ ಗುಂಡು ಹಾರಿಸಿಕೊಂಡ ರೀತಿ ಮೇಲ್ನೋಟಕ್ಕೆ ಕಂಡು ಬಂದಿದೆ.
ಇನ್ನು ತನಿಖೆಯ ಬಳಿಕ ಸಂತ್ಯಾಂಶ ಬಯಲಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿದ್ದ ಕಾರು ಮೈಸೂರು ಮೂಲದ್ದು ಎಂಬ ಮಾಹಿತಿ ಲಭ್ಯವಾಗಿದೆ. ಮೃತ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಕಾರಿನ ಹೊರಗಿರುವ ಶವದ ತಲೆಯಲ್ಲಿ ಗಾಯದ ಗುರುತು ಪತ್ತೆಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


