ಎಸ್ ಪಿ ರೋಡ್ ನಲ್ಲಿ ಅಂಗಡಿ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಫುಟ್ ಪಾತ್ ವ್ಯಾಪಾರಿಯಿಂದ ಅಂಗಡಿ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದ್ದು, ಅಂಗಡಿ ಬಂದ್ ಮಾಡಿ ವರ್ತಕರು ಪ್ರತಿಭಟನೆ ಮಾಡಿದ್ದಾರೆ.
ಈ ವೇಳೆ ಪೋಲೀಸರ ಜೊತೆಗೆ ವರ್ತಕರು ವಾಗ್ವಾದ ನಡೆಸಿದ್ದು, ಫುಟ್ ಪಾತ್ ವ್ಯಾಪಾರಿಗಳಿಂದ ಸಾಕಷ್ಟು ತೊಂದರೆ ಆಗ್ತಿದೆ. ಅಂಗಡಿ ಖಾಲಿ ಮಾಡಿಸಿ ಅಂತಾ ಹಲವಾರು ಬಾರಿ ಮನವಿ ಮಾಡಿದ್ದೀವಿ. ಬಿಬಿಎಂಪಿ ಹಾಗೂ ಪೊಲೀಸರಿಗೂ ಮನವಿ ಮಾಡಿದ್ದೀವಿ.
ಆದರೂ ಯಾವುದೇ ಪ್ರಯೋಜನ ಆಗಿಲ್ಲ, ನಮಗೆ ನ್ಯಾಯ ಸಿಗಬೇಕು. ಹಲ್ಲೆ ಮಾಡಿದವರಿಗೆ ಶಿಕ್ಷೆ ಆಗಬೇಕೆಂದು ಆಗ್ರಹ ಮಾಡಿದ್ದಾರೆ.ಇನ್ನೂ ವರ್ತಕರ ಗುಂಪು ಚದುರಿಸಲು ಪೊಲೀಸರು ಬಂದ ವೇಳೆ ಕೆಲಕಾಲ ಗೊಂದಲ ಉಂಟಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


