ತುಮಕೂರು: ಲೇಡಿಸ್ ಹಾಸ್ಟೆಲ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತುಮಕೂರು ನಗರದ ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಈ ಹಾಸ್ಟೆಲ್ ನಲ್ಲಿ 300 ವಿದ್ಯಾರ್ಥಿನಿಯರಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಅಪಾಯ ಉಂಟಾಗಿಲ್ಲ.
ಇನ್ನೂ ಹೊಗೆ ಕಾಣಿಸಿಕೊಂಡ ವೇಳೆ ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ಹೊರ ಬಂದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಹೊಗೆಯ ಪರಿಣಾಮ 6 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ ನಡೆಸಿ ಅಧಿಕಾರಿಗಳು ಹಾಗೂ ಹಾಸ್ಟೆಲ್ ವಾರ್ಡನ್, ವಿದ್ಯಾರ್ಥಿನಿಯರ ಬಳಿ ಮಾಹಿತಿ ಪಡೆದರು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA