ಬೆಳಗಾವಿ: ಜಿಲ್ಲೆಯ ಚಿಕ್ಕೋಡಿಯಲ್ಲಿ ಶಿಕ್ಷಕರ ಕೊರತೆಯಿಂದ ಬಡ ರೈತರ ಮಕ್ಕಳ ಶಿಕ್ಷಣಕ್ಕೆ ತೊಂದರೆ ಉಂಟಾಗಿದೆ. 99 ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ. ಈ ಹಿನ್ನಲೆ ಸರ್ಕಾರಿ ಶಾಲೆಗಳಿಂದ ಮಕ್ಕಳು ದೂರವಾಗುತ್ತಿರುವ ಘಟನೆ ನಡೆದಿದೆ.
ಸದ್ಯ ಅತಿಥಿ ಶಿಕ್ಷಕರೇ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಆಸರೆಯಾಗಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 8 ತಾಲೂಕುಗಳಲ್ಲಿ ಶಿಕ್ಷಕರ ಕೊರತೆಯಿದ್ದು, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಆಸರೆಯಾಗಿದ್ದ ಸರ್ಕಾರಿ ಶಾಲೆ, ಇದೀಗ ಇದ್ದು, ಇಲ್ಲದಂತಾಗಿದೆ ಎನ್ನುವುದು ಈ ಭಾಗದ ಜನರ ಆರೋಪವಾಗಿದೆ.
ಜಿಲ್ಲೆಯ ಚಿಕ್ಕೋಡಿ-8, ರಾಯಬಾಗ – 22, ಮೂಡಲಗಿ-13, ಗೋಕಾಕ್-1, ಅಥಣಿ – 30, ನಿಪ್ಪಾಣಿ–15, ಹುಕ್ಕೇರಿ, ಕಾಗವಾಡ ತಾಲೂಕಿನ ತಲಾ ಐದು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಒಬ್ಬೊಬ್ಬರೇ ಅತಿಥಿ ಶಿಕ್ಷಕರು ಇಡೀ ಶಾಲೆಯ ಮಕ್ಕಳಿಗೆ ಪಾಠ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.


